ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸುತ್ತಿರುವ ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ
ಗಣರಾಜ್ಯೋತ್ಸವವನ್ನು ವಿಶಿಷ್ಟವಾಗಿ ಆಚರಿಸಲು ವಸತಿ ಸಚಿವ ಹಾಗೂ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಮತ್ತು ಅವರ ಪುತ್ರ, ಗೋವಿಂದರಾಜನಗರ ಶಾಸಕ ಪ್ರಿಯಾಕೃಷ್ಣ ನಿರ್ಧರಿಸಿದ್ದಾರೆ.ವಿಜಯನಗರದಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಐಎಸ್ಐ ಮಾರ್ಕಿನ ಹೆಲ್ಮೆಟ್ ಗಳನ್ನು ಉಭಯ ನಾಯಕರು ಉಚಿತವಾಗಿ ಹಂಚಲಿದ್ದಾರೆ
ಇತ್ತೀಚೆಗೆ ಟ್ರಾಫಿಕ್ ಪೊಲೀಸರು ಐಎಸ್ಐ ಮಾರ್ಕಿನ ಹೆಲ್ಮೆಟ್ ಗಳ ಬೇಟೆ ಆರಂಭಿಸಿದ್ದಾರೆ. ಐಎಸ್ಐ ಮಾರ್ಕ್ ಇಲ್ಲದ, ಅರ್ಧ ತಲೆ ಮುಚ್ಚುವ ಹೆಲ್ಮೆಟ್ ಧರಿಸಿದವರಿಗೆ ಪೊಲೀಸರು ದಂಡ ವಿಧಿಸುತ್ತಿದ್ದಾರೆ. ಪೊಲೀಸರ ದಂಡದಿಂದ ಹಲವು ಪ್ರಯಾಣಿಕರು ಪರದಾಡುವಂತಾಗಿದೆ.
Comments