ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಅಂದ್ರು ಸಿಎಂ ?

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಯಜಮಾನರು. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ದೇವೇಗೌಡ ಅವರು ನೀಡಿರುವ ಹೇಳಿಕೆಯ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ ಸಿಎಂ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಆಡಳಿತಾತ್ಮಕ ಪ್ರಕ್ರಿಯೆ. ಇದರಲ್ಲಿ ರಾಜಕೀಯ ಇಲ್ಲ ಎಂದು ಹೇಳಿದರು. ಮಹಾಮಸ್ತಾಭಿಷೇಕದ ಹಣ ಹೊಡೆಯಲು ಡಿಸಿ ಬಿಡಲಿಲ್ಲ. ಇದಕ್ಕೆ ಕೋಪ ದಿಂದ ಸರ್ಕಾರ ವರ್ಗಾವಣೆ ಮಾಡಿದೆ. ಅಲ್ಲಿನ ಉಸ್ತುವಾರಿ ಸಚಿವರು ಏನ್ ಮಾಡ್ತಿದಾರೆ ಗೊತ್ತು. ಇಂಥ ಪವಿತ್ರ ಕಾರ್ಯದಲ್ಲೂ ಪರ್ಸೆಂಟೇಜ್ ಬೇಕಾ ? ಎಂದು ದೇವೇಗೌಡರು ಸರ್ಕಾರಕ್ಕೆ ಪ್ರಶ್ನೆ ಮಾಡಿದರು. ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿ ದೇವೇಗೌಡ ಅವರು ನೀಡಿರುವ ಹೇಳಿಕೆಯ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರು ಪ್ರಶ್ನಿಸಿದಾಗ ಸಿಎಂ ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
Comments