ಆನೇಕಲ್ ಕ್ಷೇತ್ರದಿಂದ ಕಣಕ್ಕಿಳಿಯಲು ಜೆ ಡಿ ಎಸ್ ಅಭ್ಯರ್ಥಿ ಫಿಕ್ಸ್

ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಕ್ಕೂ ಅವಕಾಶ ನೀಡಲಾಗಿದೆ. ಈ ಬಾರಿ ಎಚ್.ಡಿ.ಕುಮಾರಸ್ವಾಮಿಗೂ ಅವಕಾಶ ನೀಡಬೇಕಿದೆ. ದೇವೇಗೌಡರು, ಕುಮಾರಸ್ವಾಮಿ ಶೋಕಿಗಾಗಿ ರಾಜಕಾರಣ ಮಾಡುತ್ತಿಲ್ಲ. ರಾಜ್ಯದ ಜನತೆ ಒಳತಿಗೆ ಶ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಆರ್. ಮನೋಹರ್ ಹೇಳಿದರು.
ಜೆಡಿಎಸ್ ವರಿಷ್ಠರ ಸೂಚನೆ ಮೇರೆಗೆ ಆನೇಕಲ್ ವಿಧಾನಸಭೆ ಚುನಾವಣೆಯಲ್ಲಿ ಕೆ.ಪಿ.ರಾಜು ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಆರ್. ಮನೋಹರ್ ಹೇಳಿದರು.ತಾಲೂಕಿನ ಅತ್ತಿಬೆಲೆ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಜೆಡಿಎಸ್ ಪಕ್ಷ ಆಯೋಜಿಸಿದ್ದ ಪಕ್ಷ ಸೇರ್ಪಡೆ ಸಮಾರಂಭ ಹಾಗೂ ಪಟ್ಟಣದಲ್ಲಿ ನಡೆಯಲಿರುವ ಸಮಾವೇಶದ ಪೂರ್ವಭಾವಿ ಸಮಾರಂಭದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಆರ್. ಮನೋಹರ್ ಅವರು ಮಾತನಾಡಿದರು.
ಆನೇಕಲ್ ಗೆಲುವಿನೊಂದಿಗೆ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲುವು ಪಡೆಯುವುದು ಪಕ್ಷದ ಗುರಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ತಾನು ವಿಧಾನಸಭೆಗೆ ಸ್ಪರ್ಧಿಸಿದರೂ ಆನೇಕಲ್ ನಲ್ಲೂ ಹೆಚ್ಚು ಸಹಕಾರ ನೀಡಲಾಗುವುದು ಎಂದು ಹೇಳಿದರು. ಜೆಡಿಎಸ್ ರಾಜ್ಯ ಪ್ರಧಾನ ಕಾಯದರ್ಶಿ ಗೊಟ್ಟೆಗೆರೆ ಮಂಜಣ್ಣ ಮಾತನಾಡಿ, ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷದದಿಂದ ಜನತೆ ಬೇಸತ್ತಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ. ಆನೇಕಲ್‌ನಲ್ಲಿ ಜೆಡಿಎಸ್ ಗೆದ್ದರೆ ಒಂದು ಸಾವಿರ ಕೋಟಿ ರೂ. ಅಭಿವೃದ್ಧಿಗೆ ಹಣ ತರಲಾಗುವುದು ಎಂದರು.
Comments