'ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಪ್ರಜ್ಞಾವಂತ ಪಕ್ಷ ಸಜ್ಜು ..!!
ನಟ ಉಪೇಂದ್ರ ಸ್ಥಾಪಿಸಿರುವ ಕೆಪಿಜೆಪಿ ಪಕ್ಷ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗುತ್ತಿದೆ. ಉಪ್ಪಿ ರಾಷ್ಟ್ರೀಯ ಪಕ್ಷಗಳನ್ನು ಮಣಿಸಲು ಮಾಸ್ಟರ್ ಪ್ಲಾನ್ ತಯಾರಿಸಿದ್ದಾರೆ. ಹೌದು, ಜಿ.ವಿ.ಅಯ್ಯರ್ ಮೊಮ್ಮಗಳಾದ ನಟಿ ಹಾಗೂ ಲೇಖಕಿ ರೂಪ ಅಯ್ಯರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಣಕ್ಕಿಳಿಸಲು ತಯಾರಿ ನಡೆಸುತ್ತಿದೆ.
ಇದಕ್ಕೆ ಪುಷ್ಠಿ ನೀಡುವಂತೆ ಉಪೇಂದ್ರ ಕೂಡ ಈ ನಟಿಗೆ ಟಿಕೆಟ್ ನೀಡುವುದಾಗಿ ಖಚಿತಪಡಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಇನ್ನೂ ಈಗಾಗಲೇ ನಟಿ ಹಾಗೂ ಅಂಕಣಕಾರ್ತಿಯಾಗಿ ಗುರುತಿಸಿಕೊಂಡಿರುವ ರೂಪರವರು, ಕೆ.ಆರ್. ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಕೇಳುತ್ತಿದ್ದಂತೆ ಮೈಸೂರಿನಲ್ಲಿ ರಾಜಕೀಯ ಮೇಲಾಟ ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಗ್ಗಜಗ್ಗಾದ, ಇದೀಗ ಕಾಂಗ್ರೆಸ್ ತೆಕ್ಕೆಯಲ್ಲಿರುವ ಮೈಸೂರು ಕೆ.ಆರ್. ಕ್ಷೇತ್ರಕ್ಕೆ ತಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ.
Comments