ಇಂದಿನಿಂದ 5 ದಿನಗಳ ಕಾಲ ಕುಮಾರಸ್ವಾಮಿ ವಿಜಯಪುರ ಜಿಲ್ಲಾ ಪ್ರವಾಸ ಆರಂಭ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಜಯಪುರ ಜಿಲ್ಲಾ ಪ್ರವಾಸ ಆರಂಭಿಸಿದ್ದು, ಇಂದು ಯಲಗೂರ ಗ್ರಾಮದಲ್ಲಿರುವ ಶ್ರೀ ಯಲಗೂರೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜೆಡಿಎಸ್ ಪ್ರಚಾರಕ್ಕೆ ತೆರಳಿದರು.
ಕಾಂಗ್ರೆಸ್ ಉಚ್ಛಾಟಿತ ಮತ್ತು ದೇವರ ಹಿಪ್ಪರಗಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಅವರ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ನಾನಾಗೌಡ ಬಿರಾದಾರ ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಈ ಸಂದರ್ಭದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಾಥ್ ನೀಡಿದರು.ಇಂದಿನಿಂದ 5 ದಿನಗಳ ಕಾಲ ಎಚ್.ಡಿ.ಕುಮಾರಸ್ವಾಮಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ದೇವರ ಹಿಪ್ಪರಗಿ ಹಾಗೂ ಇಂಡಿ ಮತಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.
Comments