ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು ..?
ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸುವಂತೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಡಿ.ರಂದೀಪ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ನಿಬಂಧನೆ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ವಿಚಾರವಾಗಿ ಮೋಟಾರ್ ಕಾಯ್ದೆಯಡಿ ದೂರು ದಾಖಲು ಮಾಡಲು ಸೂಚಿಸಿದ್ದೇನೆ ಅಂತ ಹೇಳಿದ್ದಾರೆ.
ಇದೇ ವೇಳೆ ಅವರು ಮಾತನಾಡುತ್ತ ಹನುಮ ಜಯಂತಿ ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ವಿಶೇಷ ವಾಹನ ಬಳಸಿದ್ದರು. ಹನುಮ ಜಯಂತಿ ಮೆರವಣಿಗೆ ಅನುಮತಿ ನೀಡುವ ವೇಳೆ ವಿಶೇಷ ವಾಹನ ಬಳಸುವಂತಿಲ್ಲ ಎಂದು ನಿಬಂಧನೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಬಂಧನೆ ಉಲ್ಲಂಘನೆಗೆ ಕೇಸು ದಾಖಲಿಸಲು ಸೂಚಿಸಲಾಗಿದೆ ಅಂತ ಹೇಳಿದ್ದಾರೆ. ಇನ್ನು ಇದೇ ವೇಳೇ ಅವರು ಮಾತನಾಡುತ್ತ ಜಿಲ್ಲಾಡಳಿತದ ವತಿಯಿಂದ ಹನುಮಜಯಂತಿಯನ್ನ ವಿಶೇಷ ಪ್ರಕರಣವಾಗಿ ಪರಿಗಣಿಸಿಲಾಗಿತ್ತು ಹಾಗಾಗಿ ಅಂದು ಅಲ್ಲಿ ಸಮಸ್ಯೆಯಾಗಿದ್ದಕ್ಕೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿತ್ತು. ಇತರೆ ಜಯಂತಿಗಳು ಶಾಂತಿಯುತವಾಗಿ ನಡೆಯಲಿವೆ ಅಂತ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
Comments