ರಾಜ್ಯ ರಾಜಕೀಯಕ್ಕೆ ನಟ ಪವನ್ ಕಲ್ಯಾಣ್ ಎಂಟ್ರಿ?

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕೆ ವಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಕೆ ವಿ ನವೀನ್ ಕಿರಣ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದ್ದು. ಈ ಹಿನ್ನಲೆಯಲ್ಲಿ ನವೀನ್ ಕಿರಣ್ ಜೊತೆ ಪವನ್ ಕಲ್ಯಾಣ್ ಮಾತುಕತೆ ನಡೆಸಿದ್ದು ಜನಸೇನಾ ಪಕ್ಷದಿಂದ ಟಿಕೇಟ್ ಕನ್ಪರ್ಮ್ ಮಾಡಿಕೊಂಡಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ.
ಈ ಹಿಂದೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆ.ಡಿಎಸ್ ಜೊತೆ ದಕ್ಷಿಣ ಭಾರತದ ಖ್ಯಾತ ನಟ ತೆಲುಗು ನಟ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವರ್ ಸ್ಟಾರ್ ಪವನ್ ಕಲ್ಯಾಣ್ ಕೈ ಜೊಡಿಸಿ ಕರ್ನಾಟಕ ಹಾಗೂ ಆಂಧ್ರ ಗಡಿ ಭಾಗದ ಜಿಲ್ಲೆಗಳಾದ ರಾಯಚೂರು, ಕೋಲಾರ, ತುಮಕೂರು, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪು ಜಿಲ್ಲೆಗಳಲ್ಲಿ ಪ್ರಚಾರ ನಡೆಸುತ್ತಾರೆ ಎನ್ನಲಾಗಿತ್ತು. ಆದರೆ ಈಗ ಅದು ಸುಳ್ಳಾಗುತ್ತಿದೆ ಎನ್ನಲಾಗಿದೆ. ಅದಕ್ಕೆ ಕಾರಣ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದು, ಈ ಮೂಲಕ ಅವರು ರಾಜ್ಯ ರಾಜಕೀಯಕ್ಕೆ ಬರುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಆಂಧ್ರ ಪ್ರದೇಶದ ಹಿಂದೂಪುರಂನಲ್ಲಿ ಜನಸೇನಾ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿರುವ ನಟ ಪವನ್ ಕಲ್ಯಾಣ್ ಸಂಜೆ 5 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿದ್ದಾರೆ. ಹಿಂದೂಪುರಂ ನಲ್ಲಿ ಸಮಾವೇಶ ಮುಗಿದ ಬಳಿಕ ಅವರು ಚಿಕ್ಕಬಳ್ಳಾಪುರಕ್ಕೆ ನಗರದ ಹೊರವಲಯದ ಕೆ ವಿ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಲ್ಲಿ ಸಮಾರಂಭ ನಡೆಯಲಿದ್ದು, ಅಲ್ಲಿ ಅವರು ಪವನ್ ಕಲ್ಯಾಣ್ ಆಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Comments