ಜೆಡಿಎಸ್ ಬಂಡಾಯ ಶಾಸಕರಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್..!!

ಮುಖ್ಯಮಂತ್ರಿ ಸಿದ್ಧರಾಮಯ್ಯ ಬಂಡಾಯ ಶಾಸಕರ ಪರವಾಗಿದ್ದರೂ, ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಲು ಹಿಂದೇಟು ಹಾಕಿದೆ. ನಾಗಮಂಗಲದ ಚೆಲುವರಾಯಸ್ವಾಮಿ, ಮಾಗಡಿ ಬಾಲಕೃಷ್ಣ, ಚಾಮರಾಜಪೇಟೆಯ ಜಮೀರ್ ಅಹಮ್ಮದ್, ಹಗರಿಬೊಮ್ಮನಹಳ್ಳಿಯ ಭೀಮಾನಾಯ್ಕ, ಗಂಗಾವತಿಯ ಇಕ್ಬಾಲ್ ಅನ್ಸಾರಿ, ಶ್ರೀನಿವಾಸ ಮೂರ್ತಿ, ರಮೇಶ್ ಅವರು ಕಾಂಗ್ರೆಸ್ ಜೊತೆಗಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ, ಜೆಡಿಎಸ್ ಪಕ್ಷದಿಂದ ದೂರವಾಗಿರುವ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಸಿಗೋದು ಡೌಟ್ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಮೂಲ ಕಾರ್ಯಕರ್ತರು ಮತ್ತು ಟಿಕೆಟ್ ಆಕಾಂಕ್ಷಿಗಳು ಜೆಡಿಎಸ್ ಬಂಡಾಯ ಶಾಸಕರ ಪಕ್ಷ ಸೇರ್ಪಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕ್ಷೇತ್ರವಾರು ನಡೆಸಿದ ಸಮೀಕ್ಷೆಯಲ್ಲಿ ಬಂಡಾಯ ಶಾಸಕರ ಪರವಾಗಿ ಸಕಾರಾತ್ಮಕ ವರದಿ ಬಾರದಿರುವುದರಿಂದ ಹೈಕಮಾಂಡ್ ಟಿಕೆಟ್ ಖಾತ್ರಿಯನ್ನು ನೀಡುತ್ತಿಲ್ಲ ಎಂದು ಹೇಳಲಾಗಿದೆ. ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಆಗುವ ಪರಿಣಾಮಗಳ ಕುರಿತು ಸಮೀಕ್ಷೆಯಲ್ಲಿ ಮಾಹಿತಿ ಪಡೆದುಕೊಂಡ ಕಾಂಗ್ರೆಸ್ ಟಿಕೆಟ್ ನೀಡದಿರಲು ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಟಿಕೆಟ್ ಭರವಸೆ ನೀಡಿದ್ದರೂ, ಕೆಲವರನ್ನು ಹೊರತುಪಡಿಸಿ ಎಲ್ಲಾ ಬಂಡಾಯ ಶಾಸಕರಿಗೆ ಟಿಕೆಟ್ ಸಿಗುವ ಖಾತರಿ ಇಲ್ಲ. ಕ್ಷೇತ್ರಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುವುದರಿಂದ ಕೆಲವರನ್ನು ಹೊರತುಪಡಿಸಿ ಉಳಿದವರಿಗೆ ಕಾಂಗ್ರೆಸ್ ಟಿಕೆಟ್ ಸಿಗೋದು ಡೌಟ್ ಎಂದು ಹೇಳಲಾಗಿದೆ.
Comments