ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡನ ಮನೆ ಮೇಲೆ ಕಲ್ಲಿನಿಂದ ದಾಳಿ

ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡನ ಮನೆ ಮೇಲೆ ಕಲ್ಲಿನಿಂದ ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿಯ ಸೀಬಿನಕೆರೆ ಬಡಾವಣೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ಸುಂದರೇಶ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದರು.
ಸೋಮವಾರ ತಡರಾತ್ರಿ ಕೆಂಪು ಕಾರಿನಲ್ಲಿ ಬಂದಿದ್ದ ಕಿಡಿಗೇಡಿಗಳು ಸುಂದರೇಶ್ ಮನೆ ಎದುರು ಪಟಾಕಿ ಸಿಡಿಸಿ ಮನೆ ಮೇಲೆ ಕಲ್ಲು ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡರ ಕುಮ್ಮಕ್ಕಿನಿಂದಲೇ ನನ್ನ ಮನೆ ಮೇಲೆ ದಾಳಿ ನಡೆದಿದೆ ಎಂದು ಸುಂದರೇಶ್ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಪೊಲೀಸರು ಜಾವೇದ್ ಹಾಗೂ ಹರೀಶ್ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
Comments