ಆರ್.ಆರ್.ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿ ಮಾಸ್ಟರ್ ಪ್ಲಾನ್
ಬೆಂಗಳೂರು ನಗರದ ಪ್ರಭಾವಿ ಬಿಜೆಪಿ ನಾಯಕ, ಒಕ್ಕಲಿಗ ಸಮುದಾಯದ ಮುಖಂಡ ಆರ್.ಅಶೋಕ ಅವರು ಕ್ಷೇತ್ರ ಬದಲಾವಣೆ ಮಾಡಲಿದ್ದಾರೆ. ಬಿಜೆಪಿ ಹೈಕಮಾಂಡ್ ಕ್ಷೇತ್ರ ಬದಲಾವಣೆ ಮಾಡುವ ಬಗ್ಗೆ ಅಶೋಕ ಅವರಿಗೆ ಸೂಚನೆ ನೀಡಿದೆ ಎಂಬುದು ಹರಿದಾಡುತ್ತಿರುವ ಸುದ್ದಿ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಬೆಂಗಳೂರಿನ ರಾಜರಾಜೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ?. ಇಂತಹ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದ್ದು, ಕೆಲವು ನಾಯಕರ ಅಸಮಧಾನಕ್ಕೂ ಕಾರಣವಾಗಿದೆ. ಆರ್.ಅಶೋಕ ಅವರು ಹಾಲಿ ಪದ್ಮನಾಭನಗರ ಕ್ಷೇತ್ರದ ಶಾಸಕರು. ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕರು ಕಾಂಗ್ರೆಸ್ ನಾಯಕ, ಸಿನಿಮಾ ನಿರ್ಮಾಪಕ ಮುನಿರತ್ನ. ಮುನಿರತ್ನರನ್ನು ಸೋಲಿಸಲು ಆರ್.ಅಶೋಕ ಅವರ ಕ್ಷೇತ್ರ ಬದಲಾವಣೆಗೆ ಬಿಜೆಪಿ ತಂತ್ರ ರೂಪಿಸಿದೆ. ಆರ್.ಅಶೋಕ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜರಾಜೇಶ್ವರಿ ನಗರದಲ್ಲಿ ಪಕ್ಷ ಆಯೋಜಿಸಿದ್ದ ಪ್ರಚಾರ ಸಭೆಯಿಂದಲೂ ಅವರು ದೂರವುಳಿದಿದ್ದಾರೆ.
Comments