ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮತ್ತೂಮ್ಮೆ ಮುಖ್ಯಮಂತ್ರಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕೆಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸೈಯದ್ ರೋಷನ್ ಅಬ್ಟಾಸ್ ಮನವಿ ಮಾಡಿದರು.
ನಗರದಲ್ಲಿರುವ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾತನಾಡಿದ ಅವರು, ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾಲಾವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ಮನವರಿಕೆ ಮಾಡಿಕೊಡಲು ಮನೆ ಮನೆಗೆ ಕುಮಾರಣ್ಣ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಕೋರಿದರು.ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಹಾಗೂ ಕೇಂದ್ರದ ಬಿಜೆಪಿ ಸರಕಾರಗಳು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ. ಸದೃಢ ರಾಷ್ಟ್ರ ಮತ್ತು ನಾಡಿನ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಕೇವಲ ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಆಗಿ ಬಳಸಿಕೊಂಡಿದೆ ವಿನಾ ಅಲ್ಪಸಂಖ್ಯಾತರು ಮುಖ್ಯವಾಹಿನಿಯಲ್ಲಿ ಬರಲು ಪೋ›ತ್ಸಾಹ ಮತ್ತು ಸಹಕಾರ ನೀಡಿಲ್ಲ ಎಂದು ದೂರಿದರು.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು. ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ವರಿಷ್ಠರು ಕಾರ್ಯಕರ್ತರ ಬೇಡಿಕೆಯನ್ನು ಆಧರಿಸಿಕೊಂಡು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದರು.ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಿಂದ ಮೇಲೂರು ರವಿಕುಮಾರ್ ಅವರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಮಹಬೂಬ್ ಖಾನ್ ಮತ್ತಿತರರು ಮನವಿ ಮಾಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಝಬೀಉಲ್ಲಾ, ಮುಖಂಡರಾದ ಫಯಾಜ್ಪಾಷ, ಮುಜಾಹಿದ್, ಇಮಿಯಾಜ್, ಮುಶಾಖ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
Comments