ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಶತಸಿದ್ಧ : ಎಚ್ ಡಿಕೆ

ರಾಜ್ಯ ಮುಂಗಡ ಪತ್ರದ ಅಧಿವೇಶನದ ಬಳಿಕ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಶತಸಿದ್ಧ. ಹೀಗಾಗಿಯೇ ಈ ಬಾರಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಪಟ್ಟಿ ಬಿಡುಗಡೆ ಮಾಡುವ ಮುನ್ನವೇ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜನರ ಹಣದಲ್ಲಿ ಸಾಧನಾ ಸಮಾವೇಶ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದ ಜನರ ಮೇಲೆ ಮತ್ತಷ್ಟು ಸಾಲದ ಹೊರೆ ಹೊರಿಸುತ್ತಿದ್ದಾರೆ ಎಂದು ಆರೋಪಿಸಿದರು.ರಾಜ್ಯದ ಅಭಿವೃದ್ಧಿ ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯವೇ ಹೊರತು ಬೇರೆ ಪಕ್ಷದಿಂದಲ್ಲ ಎಂದು ಹೇಳಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ಆರೋಪಿಸಿದರು.ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಅಥವಾ ಉತ್ತರ ಕರ್ನಾಟಕದಿಂದ ಸ್ಪರ್ಧೆ ಮಾಡುವ ಬಗ್ಗೆ ಯಾವುದೇ ಖಚಿತತೆ ಇಲ್ಲ ಎಂದು ಹೇಳಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ಆರು ಕ್ಷೇತ್ರಗಳಲ್ಲಿ ಪಕ್ಷ ಜಯಗಳಿಸಲಿದೆ ಎಂದರು.
Comments