ಆನಂದ ಸಿಂಗ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಜನಾರ್ದನ ರೆಡ್ಡಿ ಏನಂದ್ರು ?

ಆನಂದ ಸಿಂಗ್ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, ಇದು ರಾಜಕೀಯ. ರಾಜಕೀಯದಲ್ಲಿ ಇದೆಲ್ಲಾ ಸಾಮಾನ್ಯ. ಆದ್ರೆ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ ಎಂದರು. ಸಂಸದ ಶ್ರೀರಾಮುಲು ಜಿಲ್ಲೆಯಲ್ಲಿ ಚುನಾವಣೆ ಎದುರಿಸಲಿದ್ದಾರೆ. ಶ್ರೀರಾಮುಲು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತಿದ್ದಾರೆ. ಅಲ್ಲದೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಇಲ್ಲಿನ ಸಿದ್ಧಾರೂಢ ಮಠಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ ಸಿದ್ದಾರೂಢ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಸದ್ಗುರು ಸಿದ್ಧಾರೂಢ ಗದ್ದುಗೆ ದರ್ಶನ ಪಡೆದ ಜನಾರ್ದನ ರೆಡ್ಡಿ ಮತ್ತು ಪತ್ನಿ ಅರುಣಾ ಅವರು 15 ನಿಮಿಷಗಳ ಕಾಲ ಭಕ್ತಿಯಿಂದ ಸಿದ್ಧಾರೂಢನಿಗೆ ಪೂಜೆ ಸಲ್ಲಿಸಿದರು.
Comments