ಬಜೆಟ್ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಕ್ರಿಯೆ..!!

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 'ಹಣಕಾಸು ಸಚಿವರು ರೈತರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನ ನಡೆಸಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಮತ್ತು ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ಪರಿಹರಿಸಲು ಕೈಗೊಂಡ ಕ್ರಮಗಳು ಸಮರ್ಪಕವಾಗಿಲ್ಲ' ಎಂದು ಹೇಳಿದರು.
ಪರಿವರ್ತನೆಯ ಮುಂಗಡ ಪತ್ರ : ಕೇಂದ್ರ ಕಾನೂನು ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಅವರು, 'ಇದು ಪರಿವರ್ತನೆಯ ಮುಂಗಡ ಪತ್ರ ಎಂದು ಹೇಳಿದ್ದಾರೆ. ಬಡವರು, ಕೂಲಿ ಕಾರ್ಮಿಕರು, ರೈತರು, ಯುವಕರ ಪರವಾದ ಬಜೆಟ್ ಇದಾಗಿದೆ' ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಭಿನಂದನೆ ಸಲ್ಲಿಸುತ್ತೇನೆ : ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಬಜೆಟ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. 'ಅರುಣ್ ಜೇಟ್ಲಿ ಅವರು ಭಾರತದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಸಾಮಾಜಿಕ ಸುರಕ್ಷತೆಗೆ ಒತ್ತು ನೀಡಿದ್ದಾರೆ. ಪರಿಶಿಷ್ಟ ಜಾತಿ, ಮಹಿಳೆ, ಬಡವರಿಗಾಗಿ ಮಾಡಿದ ಬಜೆಟ್ ಇದಾಗಿದೆ. ಇದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದರು.
Comments