ಬಿಜೆಪಿಯ ಮತ್ತೊಂದು ವಿಕೆಟ್ ಜೆಡಿಎಸ್ ಪಾಲು.!!
ಮೈಸೂರಿನ ವಿಧಾನಸಭಾ ಕ್ಷೇತ್ರಗಳಲ್ಲೊಂದಾದ ಕೆ.ಆರ್.ಕ್ಷೇತ್ರ ಇತರೆ ರಾಜಕೀಯ ಪಕ್ಷಗಳ ನಾಯಕರ ಜಿದ್ದಾಜಿದ್ದಿಗಿಂತ ಬಿಜೆಪಿ ನಾಯಕರ ನಡುವಿನ ಗುದ್ದಾಟದಿಂದಲೇ ಹೆಚ್ಚು ಪ್ರಚಾರ ಪಡೆದುಕೊಳ್ಳುತ್ತಿರುವುದು ಗುಟ್ಟಾಗಿ ಉಳಿದಿಲ್ಲ.2008ರ ಚುನಾವಣೆಯಲ್ಲಿ ಬಿಜೆಪಿ ಶಾಸಕರಾಗಿ ಆಯ್ಕೆಯಾದ ಎಸ್.ಎ.ರಾಮದಾಸ್ ಐದು ವರ್ಷಗಳ ಕಾಲ ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು, ತಮ್ಮ ಕ್ಷೇತ್ರದಲ್ಲಿ ತನ್ನದೇ ಹವಾ ಸೃಷ್ಠಿಸಿದ ಅವರು, ಆಸರೆ ಸಂಸ್ಥೆ ಮೂಲಕ ಎಲ್ಲರ ಮನೆಮನದ ಬಾಗಿಲು ತಟ್ಟಿದ್ದರು.ಇವರ ಈ ಬೆಳವಣಿಗೆ ಕಂಡು ಬಿಜೆಪಿಯಲ್ಲಿದ್ದುಕೊಂಡೇ ರಾಮದಾಸ್ ವಿರುದ್ಧ ಕತ್ತಿ ಮಸೆಯುತ್ತಿದ್ದರು.
ರಾಜೀವ್ ಅವರು ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದಾರೆ, ಅನೇಕ ವಿಚಾರಯಲ್ಲಿ ಯಡಿಯೂರಪ್ಪ ನವರು ತಾರತಮ್ಯ ಮಾಡುತ್ತಿರುವುದನ್ನು ಕಂಡು ರಾಮದಾಸ್ ಅವರಲ್ಲಿ ಅಸಮಾಧಾನ ಉಂಟುಮಾಡಿದೆ. ಯಡಿಯೂರಪ್ಪ ನವರೊಂದಿಗೆ ಅಸಮಾಧಾನ ಹೊಂದಿರುವ ರಾಮದಾಸ್ ಪಕ್ಷದೊಳಗಿನ ಬೆಳವಣಿಗೆ, ತಮ್ಮದೇ ಪಕ್ಷದಲ್ಲಿರುವ ಹಿತಶತ್ರುಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡಿರುವ ರಾಮದಾಸ್ ಅವರಿಗೆ ಬಿಜೆಪಿಯಲ್ಲಿ ಉಳಿಗಾಲವಿಲ್ಲ ಎಂಬುದು ಮನದಟ್ಟಾಗಿದೆ. ಹೀಗಾಗಿಯೇ ಅವರು ಜೆಡಿಎಸ್ ನ ಬಾಗಿಲು ತಟ್ಟಿದ್ದಾರೆ ಎನ್ನಲಾಗುತ್ತಿದೆ. ಕಮಲ ಬಿಟ್ಟು ತೆನೆ ಹೊರಲು ಸಜ್ಜಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments