ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಕಾರ್ಯಕರ್ತನ ಮೇಲೆ ಡಿಕೆಶಿ ಕೆಂಡಾಮಂಡಲ

ಡಿ.ಕೆ.ಶಿವಕುಮಾರ್ ಅವರು ಹೆಲಿಪ್ಯಾಡ್ ನಿಂದ ಕೆಳಗಿಳಿಯುತ್ತಿದ್ದಂತೆಯೇ ಸಂತಸಗೊಂಡ ಕಾರ್ಯಕರ್ತರು ಕೂಡಲೇ ಸಚಿವರತ್ತ ಮುಗಿಬೀಳಲು ಆರಂಭಿಸಿದ್ದರು. ಹಲವರು ಸಚಿವರಿಗೆ ಶುಭಾಶಯಗಳನ್ನು ಕೋರಿದ್ದರು. ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಹಿಂದೆ ಇದ್ದ ಕಾರ್ಯಕರ್ತನೊಬ್ಬ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನ ನಡೆಸಿದ್ದರು.
ಬೆಳಗಾವಿಯಲ್ಲಿ ನಡೆದ ಘಟನೆಯಂತೆಯೇ ಹೊಸಪೇಟೆಯಲ್ಲೂ ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ಕಾರ್ಯಕರ್ತನ ಮೇಲೆ ರಾಜ್ಯ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಫೆ.10 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ ನಡೆಯಲಿರುವ ಸಮಾವೇಶ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಹೊಸಪೇಟೆಗೆ ಭೇಟಿ ನೀಡಿದ್ದರು. ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡ ಡಿಕೆಶಿ ಅವರು ಮೊದಲಿಗೆ ಸೆಲ್ಫೀ ಕ್ಲಿಕ್ಕಿಸುವುದನ್ನು ನಿಲ್ಲಿಸುವಂತೆ ಸೂಚಿಸಿದರು. ಆದರೂ ಕಾರ್ಯಕರ್ತ ತನ್ನ ಪ್ರಯತ್ನವನ್ನು ನಿಲ್ಲಿಸದ ಹಿನ್ನಲೆಯಲ್ಲಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತನ ಮೊಬೈಲ್ ಫೋನ್ ಕೆಳಗೆ ಬಿದ್ದಿದೆ ಎಂದು ತಿಳಿದುಬಂದಿದೆ. ಈ ದೃಶ್ಯಾವಳಿಗಳು ಸ್ಥಳದಲ್ಲಿದ್ದ ಕೆಲವರ ಮೊಬೈಲ್ ಫೋನ್ ಗಳಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Comments