ಬಳ್ಳಾರಿಗೆ ಫೆಬ್ರವರಿ 10ಕ್ಕೆ ರಾಹುಲ್ ಗಾಂಧಿ ಆಗಮನ

ಸಾರ್ವಜನಿಕ ಸಭೆ ಹೊರತುಪಡಿಸಿ ಕೊಪ್ಪಳ ಜಿಲ್ಲೆಯ ಹುಲಿಗಮ್ಮ ದೇವಸ್ಥಾನ, ಹಾಗೂ ಗವಿ ಸಿದ್ದೇಶ್ವರ ಮಠ, ಕಲಬುರಗಿಯ ಖ್ವಾಜಾ ಬಂಡೇ ನವಾಜ್ ದರ್ಗಾಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಫೆಬ್ರವರಿ 12 ರಂದು ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹೈದ್ರಾಬಾದ್ ಮೂಲಕ ದೆಹಲಿಗೆ ತೆರಳಿದ್ದಾರೆ ಎಂದು ಪರಮೇಶ್ವರ್ ತಿಳಿಸಿದರು.
ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆಬ್ರುವರಿ 10ರಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಹೈದ್ರಾಬಾದ್ ಕರ್ನಾಟಕ ಪ್ರದೇಶದ ಕೆಲ ಜಿಲ್ಲೆಗಳಿಗೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಫೆಬ್ರುವರಿ 1ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ಮಾಡುವ ಮೂಲಕ ರಾಹುಲ್ ಗಾಂಧಿ ಪ್ರವಾಸ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕೊಪ್ಪಳ, ಯಾದಗಿರಿ, ರಾಯಚೂರು, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅವರು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
Comments