ಜೆಡಿಎಸ್ ಈ ಬಾರಿಯೂ ಸಹ ಮಂಡ್ಯದಲ್ಲಿ ಖಾತೆ ತೆರೆಯಲಿದೆ..!

2018ರ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯವನ್ನೇ ಉಸಿರಾಗಿಸಿಕೊಂಡಿರುವ ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಪಾಳಯದಲ್ಲಿ ಚುನಾವಣೆ ಸಂಚಲನ ಸೃಷ್ಟಿಸಿದೆ. ಹಲವು ಟಿಕೆಟ್ ಆಕಾಂಕ್ಷಿಗಳು ಬಿ ಫಾರಂಗಾಗಿ ನಾಯಕರ ಬೆನ್ನು ಹತ್ತಿದ್ದರೆ, ಟಿಕೆಟ್ ಖಚಿತಪಡಿಸಿಕೊಂಡಿರುವ ಅಭ್ಯರ್ಥಿಗಳು ಅಖಾಡಕ್ಕಿಳಿದು ಮತದಾರರ ಮನವೊಲಿಸುವ ಪ್ರಕ್ರಿಯೆ ಆರಂಭಿಸಿದ್ದಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿರುವ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ದಿಗ್ವಿಜಯ ಸಾಧಿಸಿ ಭದ್ರಕೋಟೆ ಮಾಡಿಕೊಂಡಿತ್ತು. ಈ ಬಾರಿ ಜೆಡಿಎಸ್ ಹೇಗಾದರೂ ಮಾಡಿ ತನ್ನ ಖಾತೆ ತೆರೆಯಲೇ ಬೇಕೆಂಬ ಹಠಕ್ಕೆ ಬಿದ್ದಿದೆ. ಅದಕ್ಕಾಗಿ ಒಂದಷ್ಟು ಕಸರತ್ತುಗಳನ್ನು ಮಾಡುತ್ತಿದೆ. ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನ್ನು ಬದಿಗೊತ್ತಿ ತಾನೇ ಪ್ರಾಬಲ್ಯ ಸಾಧಿಸಬೇಕೆಂದು ಜೆಡಿಎಸ್ ಮುಂದಾಗಿದೆ. ಎಲ್ಲ ಕಡೆಯಿಂದ ನೋಡಿದರೂ ಮಂಡ್ಯ ಜಿಲ್ಲೆಯ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಹೆಚ್ಚಿನ ಪ್ರಾಬಲ್ಯ ಕಂಡು ಬರುತ್ತಿದ್ದು, ಇಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಸದ್ಯ 2018ರ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಹೀಗಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿ ನಡುವೆ ಜೆಡಿಎಸ್ ಸಮರ್ಥ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಬಾರಿ ಇದು ಜೆಡಿಎಸ್ ಗೆ ಫಲಕೊಡುವುದಲ್ಲದೆ, ಖಾತೆ ತೆರೆಯಲು ಸಹಕಾರಿಯಾಗುತ್ತದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments