ಫೆ. 17 ರಂದು ಒಟ್ಟು 125 ಕ್ಷೇತ್ರಗಳಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆ ..!!

ಕಾಂಗ್ರೆಸ್ ಹಾಗೂ ಬಿಜೆಪಿಗೆ ಸವಾಲೊಡ್ಡುವಂತೆ ಫೆ. 17 ರಂದು ನಗರದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಕಾರ್ಯಕರ್ತರ ಸಮ್ಮುಖದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಜೆಡಿಎಸ್ ವರಿಷ್ಠರು ನಿರ್ಧರಿಸಿದ್ದಾರೆ.
ದೇವೇಗೌಡರು ತಿಂಗಳ ಹಿಂದೆಯೇ ಪಟ್ಟಿ ಪ್ರಕಟಿಸುವುದನ್ನು ತಡೆಹಿಡಿದಿದ್ದರು. ಅಭ್ಯರ್ಥಿಗಳಿಗೆ ಚುನಾವಣೆ ತಯಾರಿಯ ಸ್ಪಷ್ಟ ಸೂಚನೆ ನೀಡಲಾಗಿತ್ತು. ಉತ್ತರ ಕರ್ನಾಟಕದ ಆಯ್ದ ಕ್ಷೇತ್ರಗಳಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಪ್ರವಾಸ ಮುಗಿಸಿ ಮರಳಿ ಬಂದ ಬಳಿಕ ದೇವೇಗೌಡರೊಂದಿಗೆ ಸಮಾಲೋಚಿಸಿದ್ದು, 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ವರಿಷ್ಠರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Comments