ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಜೆಡಿಎಸ್ ಪಾಲು...!!
ರಾಯಚೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಂಧನೂರು ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ನಾಯಕ ಕರಿಯಪ್ಪ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಹಾಲಿ ಶಾಸಕ ಹಂಪನಗೌಡ ಬದರ್ಲಿ ವಿರುದ್ಧ ಕಾಂಗ್ರೆಸ್ ಪ್ರಭಾವಿ ನಾಯಕ ಕರಿಯಪ್ಪ ಅಸಮಾಧಾನ ಹೊರ ಹಾಕುವ ಮೂಲಕ ಪಕ್ಷ ಬಿಡುವ ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಪಕ್ಷದಲ್ಲಿ ನನ್ನನ್ನು ಹಾಗೂ ನನ್ನ ಬೆಂಬಲಿಗರನ್ನು ಕಡೆಗಣನೆ ಮಾಡಲಾಗ್ತಿದೆ. ಕಾಂಗ್ರೆಸ್ ಪಕ್ಷ ಸೇರುವಾಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವುದಾಗಿ ಹೇಳಿದ್ದರು. ಆದ್ರೆ ಇಲ್ಲಿಯವರೆಗೂ ಯಾವುದೇ ಉನ್ನತ ಸ್ಥಾನಮಾನ ನೀಡಿಲ್ಲ. ಕಾಂಗ್ರೆಸ್ ಪಕ್ಷದೊಂದಿಗೆ ಅಸಮಾಧಾನ ಹೊಂದಿರುವ ಕರಿಯಪ್ಪ ಅವರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments