ಮೇಲುಕೋಟೆ ಕ್ಷೇತ್ರದಲ್ಲಿ ಪ್ರತಿಪಕ್ಷಗಳನ್ನು ಹಿಮ್ಮೆಟಿಸಿ ಜೆಡಿಎಸ್ ವಿಜಯಪತಾಕೆ ಆರಿಸಲಿದೆ

ಈ ಬಾರಿಯ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರ ಕುತೂಹಲಕ್ಕೆ ಕಾರಣವಾಗಿದೆ. ಒಕ್ಕಲಿಗರ ಪಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನೇರ ಹಣಾಹಣಿ ನಿರೀಕ್ಷಿಸಲಾಗಿದೆ. ಮೇಲುಕೋಟೆ ಕ್ಷೇತ್ರದಲ್ಲಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಮಣ್ಣು ಮುಕ್ಕಿಸಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿ.ಎಂ.ರವೀಂದ್ರ ಅವರು 827 ಮತಗಳನ್ನು ಮಾತ್ರ ಪಡೆದಿದ್ದರು. ರೈತ ನಾಯಕನಿಗೆ ಎರಡು ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷದ ಸವಾಲು ಹಾಕಲಿವೆ. ಯಾರಿಗೆ ಗೆಲುವು? ಎಂಬುದು ಮಾತ್ರ ಜನರ ತೀರ್ಪಿನ ಮೇಲೆ ಅವಲಂಬಿತವಾಗಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವೆ ಹಣಾಹಣಿ ನಡೆಯುತ್ತದೆ. ಬಿಜೆಪಿ ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ. ಕ್ಷೇತ್ರದಲ್ಲಿ ಒಕ್ಕಲಿಗರ ಮತಗಳು ನಿರ್ಣಾಯಕ. 63,870 ಒಕ್ಕಲಿಗ, 36,564 ಲಿಂಗಾಯತ ಮತಗಳಿವೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಿಂದಿಕ್ಕಲು ಬಾರಿ ತಯಾರಿ ನಡೆಸಲಿದೆ. ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ಅವರು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು 70,193 ಮತಗಳನ್ನು ಪಡೆದು ಜಯಗಳಿಸಿದ್ದರು. ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು. ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಿ.ಎಂ.ರವೀಂದ್ರ ಅವರು ಕೇವಲ 827 ಮತಗಳನ್ನು ಪಡೆದು 8ನೇ ಸ್ಥಾನಕ್ಕೆ ಕುಸಿದಿದ್ದರು.
Comments