ಜಮೀರ್ ಗೆಲುವಿಗೆ ಬ್ರೇಕ್ ಹಾಕಲು ಶಪಥ ತೊಟ್ಟಿರುವ ದೇವೇಗೌಡರು
ಜೆಡಿಎಸ್‍ನಿಂದ ಮೂರು ಬಾರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ವೀರ ಎನಿಸಿಕೊಂಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಈ ಬಾರಿ ಕಾಂಗ್ರೆಸ್ ಹುರಿಯಾಳಾಗಿ ಕಣಕ್ಕಿಳಿಯುವ ಸಾಧ್ಯತೆ ಇರುವುದರಿಂದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಈ ಬಾರಿ ಕುರುಕ್ಷೇತ್ರವಾಗಿ ಮಾರ್ಪಟ್ಟಿದೆ. 2005ರಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಜಮೀರ್ ಅಹಮ್ಮದ್ ಅವರು ಇದುವರೆಗೂ ಸೋಲು ಕಂಡಿಲ್ಲ. ಆದರೆ, ಈ ಬಾರಿ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಕಾಂಗ್ರೆಸ್ ಪಕ್ಷದಿಂದಲೇ ಟಿಕೆಟ್ ದೊರೆಯುವ ಸಾಧ್ಯತೆಗಳಿವೆ. ಒಂದು ವೇಳೆ ಕೈ ಟಿಕೆಟ್ ತಪ್ಪಿದರೂ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಅವರ ಕೆಂಗಣ್ಣಿಗೆ ಗುರಿಯಾಗಿರುವ ಜಮೀರ್ ಅವರ ಗೆಲುವು ಈ ಬಾರಿ ಅಷ್ಟು ಸುಲಭವಲ್ಲ ಎನ್ನಲಾಗಿದೆ. ಜಮೀರ್ ಅವರ ಗೆಲುವಿಗೆ ಬ್ರೇಕ್ ಹಾಕಲು ಶಪಥ ತೊಟ್ಟಿರುವ ದೇವೇಗೌಡರು ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಗಾದೆ ಮಾತಿನಂತೆ ತಮ್ಮ ಪರಮಾಪ್ತ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಆರೀಫ್ ಪಾಷ ಅವರ ಪುತ್ರ ಹಾಗೂ ಜಮೀರ್ ಅಹಮ್ಮದ್ ಖಾನ್ ಅವರ ಬಲಗೈ ಬಂಟರಂತಿದ್ದ ಪಾದರಾಯನಪುರ ವಾರ್ಡ್ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಅವರಿಗೆ ಟಿಕೆಟ್ ನೀಡಲು ತೀರ್ಮಾನಿಸಿದ್ದಾರೆ.ಈ ಬಾರಿಯೂ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು ಸಾಧಿಸಲಿದೆ, ಇಮ್ರಾನ್ ಖಾನ್ ಅವರು ಗುರುವಿಗೆ ಮಣ್ಣು ಮುಕ್ಕಿಸಲು ಸಜ್ಜಾಗಿದ್ದಾರೆ
Comments