ಮೋದಿ ಭಾಷಣದ ಬಗ್ಗೆ ಭಾರೀ ಚರ್ಚೆ ...! l
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಭಾನುವಾರ ಮಾಡಿದ ಭಾಷಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಭಾಷಣ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಮಾತಿನ ಸಮರಕ್ಕೆ ಕಾರಣವಾಗಿದೆ.
ನರೇಂದ್ರ ಮೋದಿ ಅವರ ಭಾಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ 5 ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಪ್ರಧಾನ ಮಂತ್ರಿಗಳನ್ನು ಚರ್ಚೆಗೆ ಆಹ್ವಾನಿಸಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದರಾಮಯ್ಯ ಅವರ ಟ್ವಿಟ್‌ಗೆ ಉತ್ತರ ನೀಡಿದ್ದಾರೆ. ಅವರಿಗೆ 5 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
Comments