ಬಿಎಸ್ಪಿ ಯೊಂದಿಗೆ ಮೈತ್ರಿ ನಂತರ ‘ಕೈ-ಕಮಲ’ಕ್ಕೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾದ ಜೆಡಿಎಸ್
ಮುಂದಿನ ವಿಧಾನಸಭೆ ಚುನಾವಣೆಗೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಿರುಸಿನ ಪ್ರಚಾರ ನಡೆಸಲಾಗಿದೆ.ರಾಷ್ಟ್ರೀಯ ಪಕ್ಷಗಳನ್ನು ಮಣಿಸಲು ಜೆಡಿಎಸ್ ಕಸರತ್ತು ನಡೆಸುತಿದೆ. ಮುಂದಿನ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರ ರಚಿಸಲು ತಯಾರಿ ನಡೆಸಿದೆ.
ತನ್ನದೇ ಆದ ಸ್ಟ್ರಾಟಜಿಯೊಂದಿಗೆ ಅಧಿಕಾರ ಹಿಡಿಯಲು ಮುಂದಾಗಿರುವ ಜೆ.ಡಿ.ಎಸ್. ರಾಷ್ಟ್ರೀಯ ಪಕ್ಷಗಳನ್ನು ಮಣಿಸಲು ಬಿ.ಎಸ್.ಪಿ.ಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರೊಂದಿಗೆ ಬಿಎಸ್ಪಿಯೊಂದಿಗೆ ಗುರುತಿಸಿಕೊಂಡಿರುವ ಮತಗಳನ್ನು ಸೆಳೆಯಲು ಪ್ಲಾನ್ ಮಾಡಲಾಗಿದೆ. ಬಿಎಸ್ಪಿಗೆ 20 ಸೀಟುಗಳನ್ನು ಬಿಟ್ಟುಕೊಟ್ಟಿರುವ ಜೆಡಿಎಸ್. ಮುಂದಿನ ಹಂತದಲ್ಲಿ ಸಿ.ಪಿ.ಎಂ.ನೊಂದಿಗೆ ಮೈತ್ರಿಗೆ ಮುಂದಾಗಿದೆ.ಈ ಮೂಲಕ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಆಡಳಿತಕ್ಕೆ ಬರಲು ಕಾರ್ಯತಂತ್ರ ರೂಪಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಅನುಸಾರ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ.
Comments