ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿಯ ಹಾಲಿ ಶಾಸಕನಿಗೆ ಸೆಡ್ಡು ಹೊಡೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್..!!
ಬುದ್ಧಿವಂತರ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿರುವ ಬಸವನಗುಡಿ ವಿಧಾನಸಭಾ ಕ್ಷೇತ್ರವನ್ನು ಭೇದಿಸಲು ಜೆಡಿಎಸ್ ರಣತಂತ್ರ ರೂಪಿಸುತ್ತಿವೆ. ಬ್ರಾಹ್ಮಣರು ಮತ್ತು ನಾಗಮಂಗಲ ಮೂಲದ ಒಕ್ಕಲಿಗರೇ ಹೆಚ್ಚಾಗಿ ವಾಸಿಸುತ್ತಿರುವ ಬಸವನಗುಡಿಯಲ್ಲಿ ಹಾಲಿ ಶಾಸಕ ಬಿಜೆಪಿಯ ರವಿಸುಬ್ರಹ್ಮಣ್ಯ ಗೆಲುವಿನ ಕನಸು ಕಾಣುತ್ತಿದ್ದಾರೆ. ಆದರೆ, ಇವರ ಕನಸಿಗೆ ಅವರದೇ ಪಕ್ಷದ ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅಡ್ಡಗಾಲಾಗಿ ಪರಿಣಮಿಸುವ ಸಾಧ್ಯತೆಗಳಿವೆ.
ಈ ಬಾರಿ ಬಸವನಗುಡಿ ಕ್ಷೇತ್ರದಲ್ಲಿ ನನಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಬಿಜೆಪಿಯ ಈ ಭಿನ್ನಮತವು ಜೆಡಿಎಸ್ ಗೆ ಪ್ಲಸ್ ಪಾಯಂಟ್ ಆಗಲಿದೆ.ಬಿಜೆಪಿ ಭದ್ರಕೋಟೆಯನ್ನು ಛಿದ್ರ ಮಾಡಲು ಜೆಡಿಎಸ್ ರಣತಂತ್ರ ರೂಪಿಸುತ್ತಿದ್ದು, ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಜೆಡಿಎಸ್‍ನಿಂದ ಒಕ್ಕಲಿಗ ಜನಾಂಗದ ಪ್ರಮುಖ ನಾಯಕರಾದ ಬಾಗೇಗೌಡ ಅವರು ಈ ಬಾರಿಯೂ ತೆನೆ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಶತಸಿದ್ಧ. ಈ ಬಾರಿ ರಾಜ್ಯದೆಲ್ಲೆಡೆ ಕುಮಾರಸ್ವಾಮಿ ವರ್ಚಸ್ಸು ವೃದ್ಧಿಸಿದೆ. ವಿಧಾನ ಪರಿಷತ್ ಸದಸ್ಯ ಶರವಣ ಅವರು ಅಪ್ಪಾಜಿ ಕ್ಯಾಂಟಿನ್ ಸ್ಥಾಪಿಸಿ ಈ ಭಾಗದಲ್ಲಿ ತಮ್ಮದೇ ಆದ ಮತಬ್ಯಾಂಕ್ ಹೊಂದಿದ್ದಾರೆ. ಮಾತ್ರವಲ್ಲ, ನಾಗಮಂಗಲ ಮೂಲದ ಒಕ್ಕಲಿಗರು ಮತ್ತು ಬಿಜೆಪಿ ವಿರುದ್ಧ ಮುನಿಸಿಕೊಂಡಿರುವ ಬ್ರಾಹ್ಮಣರು ಜೆಡಿಎಸ್‍ಗೆ ಮತ ಚಲಾಯಿಸಿ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದಾರೆ ಬಾಗೇಗೌಡರು. ಒಟ್ಟಾರೆ ಬಿಜೆಪಿ ಭದ್ರಕೋಟೆಯನ್ನು ಛಿದ್ರ ಮಾಡಲು ಜೆಡಿಎಸ್ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ.
Comments