ಬೀದರ್ ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಜೆಡಿಎಸ್ ಅಭ್ಯರ್ಥಿ ಯಾರು ಗೊತ್ತಾ?

2008ರಲ್ಲಿ ರಚನೆಯಾದ ಕ್ಷೇತ್ರ ಬೀದರ್ ದಕ್ಷಿಣ. ಬೀದರ್ ಕ್ಷೇತ್ರದ ಕೆಲವು ಭಾಗ, ಹುಮ್ನಾಬಾದ್ ತಾಲೂಕಿನ ಎರಡು ವೃತ್ತಗಳನ್ನು ಸೇರಿಸಿದ ಬೀದರ್ ದಕ್ಷಿಣ ಕ್ಷೇತ್ರ ರಚನೆ ಮಾಡಲಾಗಿದೆ. ಬಹುತೇಕ ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಕ್ಷೇತ್ರವಿದು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತರಾದ ಬಂಡೆಪ್ಪ ಕಾಶೇಂಪುರ್ ಅವರ ತವರು ಕ್ಷೇತ್ರವಿದು. ಈ ಕ್ಷೇತ್ರದಲ್ಲಿ ಜೆಡಿಎಸ್ ಅಧಿಪತ್ಯ ಸಾಧಿಸುತ್ತಿದೆ ಎಚ್.ಡಿ.ಕುಮಾರಸ್ವಾಮಿ ಅವರ ಪರಮಾಪ್ತರಲ್ಲಿ ಒಬ್ಬರಾದ ಬಂಡೆಪ್ಪ ಕಾಶೇಂಪುರ ಅವರಿಗೆ ಈ ಬಾರಿಯ ಚುನಾವಣೆಯಲ್ಲಿಯೂ ಟಿಕೆಟ್ ಖಚಿತ. ಅದರಲ್ಲೂ ಈ ಬಾರಿ ಉತ್ತರ ಕರ್ನಾಟಕದ ಮೇಲೆ ಕಣ್ಣಿಟ್ಟಿರುವ ಎಚ್.ಡಿ.ಕುಮಾರಸ್ವಾಮಿ ಆಪ್ತನನ್ನು ಗೆಲ್ಲಿಸಿಕೊಂಡು ಬರಲು ವಿಶೇಷ ಕಾಳಜಿ ತೋರಲಿದ್ದಾರೆ.ಹೀಗಾಗಿ ಜೆಡಿಎಸ್ ಬೀದರ್ ದಕ್ಷಿಣ ಕ್ಷೇತ್ರವನ್ನು ವಶಕ್ಕೆ ಪಡೆಯುವುದರಲ್ಲಿ ಎರಡು ಮಾತಿಲ್ಲ.
Comments