ಬಿಜೆಪಿಯ ಮತ್ತೊಂದು ಪ್ರಭಾವಿ ವಿಕೆಟ್ ಜೆಡಿಎಸ್ ತೆಕ್ಕೆಗೆ..!!
ಲಿಂಗಸುಗೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿರುವ ಕಾರಣ ಲಿಂಗಸುಗೂರು ಬಿಜೆಪಿಯ ಮುಖಂಡರು ಪಕ್ಷ ತೊರೆದು ಜೆಡಿಎಸ್ ಸೇರಲಿದ್ದಾರೆ.
ಲಿಂಗಸುಗೂರು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಸಿದ್ದು ಬಂಡಿ ಜೆಡಿಎಸ್ ಸೇರಲಿದ್ದಾರೆ. ಮಾನಪ್ಪ ವಜ್ಜಲ್ ಬಿಜೆಪಿ ಸೇರಿದ ಬಳಿಕ ಪಕ್ಷದಲ್ಲಿ ಅಸಮಾಧಾನ ಉಂಟಾಗಿದೆ.ಬಿಜೆಪಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾಗಿದ್ದ ಸಿದ್ದು ಬಂಡಿ ಜ.22ರಂದು ಬಿಜೆಪಿ ತೊರೆದಿದ್ದರು. ಈಗ ಅವರು ಜೆಡಿಎಸ್ ಸೇರಲು ಮುಂದಾಗಿದ್ದು, ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ.ಸಿದ್ದು ಬಂಡಿ ಲಿಂಗಸುಗೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಕ್ಷೇತ್ರದ ಶಾಸಕ, ಜೆಡಿಎಸ್ ನಾಯಕ ಮಾನಪ್ಪ ವಜ್ಜಲ್ ಬಿಜೆಪಿ ಸೇರಿದ್ದು, ಅವರಿಗೆ ಟಿಕೆಟ್ ಖಚಿತ ಎಂದು ತಿಳಿದುಬಂದಿದೆ. ಮಾನಪ್ಪ ವಜ್ಜಲ್ ಬಿಜೆಪಿ ಸೇರಿದ ಬಳಿಕ ಸಿದ್ದು ಬಂಡಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದ ಬಳಿಕ ಸಿದ್ದು ಬಂಡಿ ಜೆಡಿಎಸ್ ಸೇರುವ ನಿರ್ಧಾರ ಕೈಗೊಂಡಿದ್ದಾರೆ.
Comments