ವಿಪಕ್ಷಗಳ ಕಾರ್ಯವೈಖರಿಯ ಬಗ್ಗೆ ಗುಣಗಾನ ಮಾಡಿದ ಎಚ್ ಡಿಕೆ
ರಾಷ್ಟೀಯ ಪಕ್ಷಗಳು ಯಾವ ರೀತಿ ಕಾರ್ಯ ನಿರ್ವಹಿಸುತ್ತಿವೆ ಎಂಬುದರ ಬಗ್ಗೆ ಎಚ್ ಡಿ ಕುಮಾರಸ್ವಾಮಿಯವರು ವಿಪಕ್ಷಗಳ ಕಾರ್ಯವೈಖರಿಯನ್ನು ಪ್ರಶ್ನಿಸಿದರು. ಬಿಜೆಪಿ ನಾಯಕರು ಕೊಳಗೇರಿಯಲ್ಲಿ ವಾಸ್ತವ್ಯ ಹೂಡುವುದಾಗಿ ಹೇಳಿ ಎರಡು ಅಂತಸ್ತಿನ ಮನೆಯಲ್ಲಿ ಮಲಗಿ ಎದ್ದು ಬಂದಿದ್ದಾರೆ ವಿನಃ ಯಾವುದೇ ಪರಿಹಾರ ಕಂಡುಕೊಳ್ಳುವ ಬಗ್ಗೆ ಚಿಂತಿಸಿಲ್ಲವೆಂದು ಆರೋಪಿಸಿದರು.
ಅದು ಕೊಳಗೇರಿ ವಾಸ್ತವ್ಯವೇ ಎಂದು ಪ್ರಶ್ನಿಸಿದರು. ಈಗ ಸ್ಲಂಗಳ ಅಭಿವೃದ್ದಿ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸ್ಲಂ ಗಳ ಅಭಿವೃದ್ದಿಗೆ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ನೀರಾವರಿ ಸೇರಿದಂತೆ ಅನೇಕ ಸಮಸ್ಯೆಗಳು ರಾಜ್ಯದಲ್ಲಿದ್ದರೂ ಬಿಜೆಪಿ ನಾಯಕರು ಅವುಗಳ ಬಗ್ಗೆ ಗಮನ ಹರಿಸದೇ, ಮಾತನಾಡದೇ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಪ್ರಧಾನಿಯವರನ್ನು ಗುರಿಯಾಗಿಸಿಕೊಂಡು ಮಾತ್ರ ಮಾತನಾಡುತ್ತಿದ್ದಾರೆ. ರೈತರ ಸಾಲ ಮನ್ನಾ, ಕುಡಿಯುವ ನೀರು ಯೋಜನೆಗಳ ಬಗ್ಗೆ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಮೌನ ವಹಿಸಿದ್ದಾರೆ. ಮಲೆನಾಡಿನ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಅದೇ ರೀತಿ ರಾಜ್ಯದ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸದೇ ಮೋದಿ ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಚ್ ಡಿಕೆ, ರಾಷ್ಟ್ರೀಯ ಪಕ್ಷಗಳು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಜೆಡಿಎಸ್ ಪಕ್ಷಕ್ಕೆ ರಾಜ್ಯದ ಜನ ಆಶೀರ್ವಾದ ಮಾಡಿದಲ್ಲಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಇದಾವುದನ್ನು ಬಿಟ್ಟು ಅವರಿವರ ಮೇಲೆ ಗೂಬೆ ಕುರಿಸುವುದನ್ನು ಬಿಟ್ಟು ಕಾಂಗ್ರೆಸ್ ಬಿಜೆಪಿ ಬೇರೆ ಏನು ಮಾಡಿಲ್ಲವೆಂದರು.
Comments