ಜೆಡಿಎಸ್ ರೆಬೆಲ್ ಶಾಸಕರಿಗೆ ಅಮಾವಾಸ್ಯೆ ಪೂಜೆ..!!

ಜೆಡಿಎಸ್‌ನಿಂದ ಅಮಾನತುಗೊಂಡಿರುವ ಶಾಸಕರಲ್ಲಿ ಮೂವರು ದೇವರ ಮೊರೆ ಹೋಗಿದ್ದಾರೆ. ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆಯಂದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಾಲಯದಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ನಡೆಯುತ್ತಿದೆ. ಬಂಡಾಯ ಶಾಸಕರು ಕುಟುಂಬ ಸದಸ್ಯರ ಜೊತೆ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ನಾಗಮಂಗಲ ಕ್ಷೇತ್ರದ ಶಾಸಕ ಚಲುವರಾಯಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ದಂಪತಿ ಸಮೇತ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.ಅವಾಮಾಸ್ಯೆಯಂದು ಕಾಲಭೈರವೇಶ್ವರ ಸೇರಿದಂತೆ ಕ್ಷೇತ್ರಾಧಿ ದೇವತೆಗಳ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿಯಾಗಲಿದೆ ಎಂಬ ನಂಬಿಕೆ ಇದೆ. ಆದ್ದರಿಂದ, ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಈ ನಾಯಕರು ಕಾಂಗ್ರೆಸ್ ಸೇರುವ ಸಿದ್ಧತೆಯಲ್ಲಿದ್ದಾರೆ. ಆದರೆ, ಎಂದು ಪಕ್ಷ ಸೇರಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.
Comments