ಫೆ.16ರಂದು ರಾಜ್ಯ ಬಜೆಟ್ ಮಂಡನೆಗೆ ಸಿದ್ದರಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018-19ನೇ ಸಾಲಿನ ಆಯವ್ಯಯವನ್ನು ಫೆ.16ರಂದು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಬಜೆಟ್‍ಗೆ ಅಂತಿಮ ರೂಪು ನೀಡಲಾಗುತ್ತಿದೆ. ಮುಖ್ಯಮಂತ್ರಿಯಾಗಿ 6ನೇ ಹಾಗೂ ಹಣಕಾಸು ಸಚಿವರಾಗಿ 13ನೇ ಬಜೆಟನ್ನು ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ.
ಆಡಳಿತ ಸರ್ಕಾರದ ಕೊನೆಯ ಬಜೆಟ್ ಕೂಡ ಇದಾಗಲಿದ್ದು, ಚುನಾವಣಾ ವರ್ಷವೂ ಆಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಹೆಚ್ಚು ಒತ್ತುಕೊಡುವ ಸಾಧ್ಯತೆಗಳಿವೆ. ಕಳೆದ ಐದು ವರ್ಷಗಳಲ್ಲಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಈ ಬಜೆಟ್‍ನಲ್ಲಿ ಮುಂದುವರೆಸಲಿದ್ದಾರೆ. ಕಳೆದ ಐದು ವರ್ಷಗಳ ಸಾಧನೆಗಳ ಜತೆಗೆ ಮತದಾರರನ್ನು ಓಲೈಸುವ ಸಲುವಾಗಿ ಕೆಲವು ಆಕರ್ಷಕ ಮತ್ತು ಜನಪ್ರಿಯ ಕಾರ್ಯಕ್ರಮಗಳನ್ನು ಘೋಷಿಸುವ ನಿರೀಕ್ಷೆ ಇವೆ ಎಂದು ಉನ್ನತ ಮೂಲಗಳು ತಿಳಿಸಿವೆ
Comments