ಬಿಎಸ್‌ಪಿ-ಎನ್‌ಸಿಪಿ ಮೈತ್ರಿ ನಂತರ ರಾಷ್ಟ್ರೀಯ ಪಕ್ಷಗಳಿಗೆ ಬಿಗ್ ಶಾಕ್ ಕೊಟ್ಟ ಎಚ್ ಡಿಕೆ

ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುವ ಉದ್ದೇಶದಿಂದಲೇ ವಿವಿಧ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಬಾಗೇಪಲ್ಲಿಯಲ್ಲಿ ಆಯೋಜಿಸಿದ್ದ ರೈತರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಯನ್ನು ಅಧಿಕಾರದಿಂದ ದೂರವಿಟ್ಟು ಸ್ವತಂತ್ರ್ಯವಾಗಿ ಸರ್ಕಾರ ರಚಿಸುವ ಉಮೇದನ್ನು ಜೆಡಿಎಸ್ ಹೊಂದಿದೆ ಎಂದರು.
ಎನ್‌ಸಿಪಿ ಹಾಗೂ ಬಿಎಸ್‌ಪಿಯೊಂದಿಗೆ ಈಗಾಗಲೇ ಮೈತ್ರಿ ಸಾಧಿಸಿದ್ದು, ಇನ್ನೂ ಕೆಲವು ಪಕ್ಷಗಳ ಜೊತೆಗೆ ಮೈತ್ರಿ ಮಾತುಕತೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ನಾವು ನಾಡಿನ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿದ್ದೇವೆ ಆದರೆ ಕಾಂಗ್ರೆಸ್, ಬಿಜೆಪಿಯ ಮುಖಂಡರು ಪರಸ್ಪರ ಟೀಕೆಯಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜನ ನಮ್ಮನ್ನು ಬೆಂಬಲಿಸುತ್ತಿದ್ದಾರೆ. ಬೇರೆ ಪಕ್ಷದವರ ಅಬ್ಬರದ ಪ್ರಚಾರ ಮಾಧ್ಯಮಗಳಲ್ಲಿ ಕಾಣುತ್ತಿದೆ. ಆದರೆ ನಮ್ಮ ಕಾರ್ಯಕ್ರಮಗಳಿಗೆ ಜನ ಸ್ವಯಂ ಪ್ರೇರಣೆಯಿಂದ ಬರುತ್ತಿದ್ದಾರೆ, ನಮಗೆ ಈ ಬಾರಿ ಸರ್ಕಾರ ರಚನೆಗೆ ಬೇಕಾದಷ್ಟು ಸ್ಥಾನಗಳು ದೊರೆಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಜೆಟ್ ಬಗ್ಗೆ ಮಾತನಾಡಿದ ಅವರು ಅಧಿಕಾರ ಬಿಟ್ಟು ಹೋಗುವ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸುವ ಯೋಜನೆಗಳಿಗೆ ಬೆಲೆ ಇಲ್ಲ. ಆ ಘೋಷಣೆಗಳ ಜಾರಿ ಮುಂಬರುವ ಮುಖ್ಯಮಂತ್ರಿ ಮೇಲೆ ಅವಲಂಬಿಸಿರುತ್ತದೆ' ಎಂದರು.
Comments