2018 ರ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯನವರ ಯೋಜನೆಗಳು?

16 Feb 2018 1:19 PM | Politics
1019 Report

ಆರೋಗ್ಯ ಕರ್ನಾಟಕ ಯೋಜನೆಯನ್ನು ಫೆಬ್ರವರಿಯಲ್ಲಿ ಆರಂಭಿಸಲಾಗುತ್ತದೆ. ಧಾರವಾಡ ವಿಶ್ವವಿದ್ಯಾಲಯದಲ್ಲಿ 1 ಕೋಟಿ ವೆಚ್ಚದಲ್ಲಿ ಕೊಂಕಣಿ ಅಧ್ಯಯನ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಉನ್ನತ ಶಿಕ್ಷಣ ಇಲಾಖೆಗೆ 4,514 ಕೋಟಿ ಅನುದಾನ ಮೀಸಲು.

 ಬಸವಣ್ಣನವರ ಬಗ್ಗೆ ಹೆಚ್ಚಿನ ಅಧ್ಯಯನಕ್ಕೆ ಮೈಸೂರು ವಿವಿಯಲ್ಲಿ ಬಸವ ಅಧ್ಯಯನ ಕೇಂದ್ರ ವನ್ನು 2 ಕೋಟಿ ವೆಚ್ಚದಲ್ಲಿ ಸ್ಥಾಪನೆ.ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿಯ ಸ್ನಾತಕೋತ್ತರ ಅಧ್ಯಯನ ಕೇಂದ್ರ ಸ್ಥಾಪನೆ. 100 ವರ್ಷ ಪೂರೈಸಿದ ಸರ್ಕಾರಿ ಶಾಲೆಗಳನ್ನು ಪಾರಂಪರಿಕ ಶಾಲೆಗಳು ಎಂದು ಘೋಷಣೆ ಮಾಡಿ ಹಂತ-ಹಂತವಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 22,350 ಕೋಟಿ ಅನುದಾನ ನೀಡಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡಲಾಗುತ್ತದೆ. ಹಂತ-ಹಂತವಾಗಿ ಸಿಸಿಟಿವಿ ಅಳವಡಿಸಲಾಗುತ್ತದೆ.  ಪ್ರಾಥಮಿಕ ಮತ್ತು ಪ್ರೌಢ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಒತ್ತು ನೀಡಲಾಗುತ್ತದೆ. ಹಂತ-ಹಂತವಾಗಿ ಸಿಸಿಟಿವಿ ಅಳವಡಿಸಲಾಗುತ್ತದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯೂಸಿಯ ಪರೀಕ್ಷಾ ಅಕ್ರಮಗಳನ್ನು ತಡೆಯಲು 'ಕರ್ನಾಟಕ ಸುರಕ್ಷಿತ ಪರೀಕ್ಷಾ ವ್ಯವಸ್ಥೆ' ಜಾರಿಗೆ ತರಲಾಗಿದೆ. ಪ್ರಾಣಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತಿದೆ.

ಇದರ ಜೊತೆಗೆ ಕುಟುಂಬದವರಿಗೆ 5 ವರ್ಷಗಳ ಕಾಲ 2 ಸಾವಿರ ರೂ. ಮಾಶಾಸನ ವಿತರಣೆ ಮಾಡಲಾಗುತ್ತದೆ.  ರೈತರು ಬೆಳೆದ ಮರಗಳನ್ನು ತಾಲೂಕು ಮಟ್ಟದಲ್ಲಿ ಖರೀದಿ ಮಾಡಲು ಅನುಕೂಲವಾಗುವಂತೆ ಎಪಿಎಂಸಿಯಲ್ಲಿಯೂ ಖರೀದಿ ಮಾಡುವಂತೆ ವ್ಯವಸ್ಥೆ ಮಾಡಲಾಗುತ್ತದೆ. ನದಿಗಳನ್ನು ಸಂರಕ್ಷಣೆ ಮಾಡಲು ನದಿಗಳ 1 ಕಿ.ಮೀ. ವ್ಯಾಪ್ತಿಯಲ್ಲಿ ಬೃಹತ್ ಗಿಡಗಳನ್ನು ನೆಡಲಾಗುತ್ತದೆ. ಇದಕ್ಕಾಗಿ 10 ಕೋಟಿ ರೂ. ಮೀಸಲು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಾಲುಮರದ ತಿಮ್ಮಕ್ಕ ಉದ್ಯಾನವನ ನಿರ್ಮಾಣ ಮಾಡಲಾಗುತ್ತದೆ. ಪಶ್ಚಿಮ ವಾಹಿನಿ ಯೋಜನೆಯಡಿ ದಕ್ಷಿಣ ಕನ್ನಡದ ಅರೆಕಳ ಎಂಬಲ್ಲಿ ನೇತ್ರಾವತಿ ನದಿಗೆ ಉಪ್ಪು ನೀರು ಸೇರುವುದನ್ನು ತಪ್ಪಿಸಲು ಕಿಂಡಿ ಅಣೆಕ್ಟಟ್ಟನ್ನು 174 ಕೋಟಿ ವೆಚ್ಚದಲ್ಲಿ ನಿರ್ಮಣ ಮಾಡಲಾಗುತ್ತದೆ. ರಾಜ್ಯದಲ್ಲಿ 43 ತಾಲೂಕುಗಳಲ್ಲಿ ಅಂತರ್ಜಲ ಅಭಿವೃದ್ಧಿಗೆ ಚೆಕ್ ಡ್ಯಾಂ ಅನ್ನು 50 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತದೆ. 250 ಕೋಟಿ ವೆಚ್ಚದಲ್ಲಿ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸುತ್ತಮುತ್ತಲಿನ ಕೆರೆಗಳಿಗೆ ತುಂಗ-ಭದ್ರಾ ನದಿಯಿಂದ ನೀರು ಹರಿಸಲಾಗುತ್ತದೆ. ಎತ್ತಿನಹೊಳೆ ಯೋಜನೆಯಡಿ 527 ಕೆರೆಯನ್ನು ಭರ್ತಿ ಮಾಡಲಾಗುತ್ತದೆ. ಸ್ಥಗಿತಗೊಂಡಿರುವ ಎಲ್ಲಾ ಏತ ನೀರಾವರಿ ಯೋಜನೆಗಳನ್ನು ಪುನಶ್ಚೇತನಗೊಳಿಸಲಾಗುತ್ತದೆ. ಕೆರೆಗಳನ್ನು ಭರ್ತಿ ಮಾಡಲು 2276ಕೋಟಿ ಕೆರೆಗಳನ್ನು ಭರ್ತಿ ಮಾಡಲಾಗುತ್ತದೆ. ಕುಡಿಯವು ನೀರಿಗಾಗಿ ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಮೀನುಗಾರರಿಗೆ 35 ಎಂಎಂ ಬಲೆಗಳನ್ನು ಉಚಿತವಾಗಿ ನೀಡಲಾಗುತ್ತದೆ.

Edited By

Shruthi G

Reported By

Madhu shree

Comments