ಸಿಎಂ ಸಿದ್ದರಾಮಯ್ಯನವರ ಪುತ್ರನಿಗೆ ಗ್ರಾಮಸ್ಥರಿಂದ ಘೇರಾವ್
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಅವರು ಕಾಂಕ್ರೀಟ್ ರಸ್ತೆಯ ಭೂಮಿಪೂಜೆ ನೆರವೇರಿಸುವುದಕ್ಕೆ ವಿರೋಧ ವ್ಯಕ್ತವಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಭಾನುವಾರ ಘರ್ಷಣೆ ನಡೆದಿದೆ.
ಗೆಜ್ಜಗಳ್ಳಿಯಲ್ಲಿ ಭೂಮಿ ಪೂಜೆಗೆ ಯತೀಂದ್ರ ಬಂದಿದ್ದನ್ನು ಕಂಡು ಜೆಡಿಎಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಟ್ಟು ಕಾಮಗಾರಿಗೆ ಚಾಲನೆ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ.ಮಧ್ಯ ಪ್ರವೇಶಿಸಿದ ಪೊಲೀಸರು ಗುಂಪು ಚದುರಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯ
ಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
Comments