ಕಾಂಗ್ರೆಸ್ ಮುಖಂಡನ ಪುಂಡಾಟಿಕೆಗೆ ಸೂಕ್ತ ಕ್ರಮ ಜರುಗಿಸುವಂತೆ ಸಿಎಂ ಆದೇಶ

ಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ಕಚೇರಿಗೆ ನುಗ್ಗಿ ಅಧಿಕಾರಿಗಳು ಮತ್ತು ಕಡತಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ಜಮೀನು ಪರಭಾರೆ ವಿಚಾರವೊಂದರಲ್ಲಿ ಅಕ್ರಮ ಖಾತೆ ಮಾಡಿಕೊಡುವಂತೆ ಶಾಸಕ ಭೈರತಿ ಬಸವರಾಜ್ ಕಟ್ಟಾ ಬೆಂಬಲಿಗನಾಗಿರುವ ನಾರಾಯಣಸ್ವಾಮಿ ಕೆಆರ್ ಪುರಂ ವಲಯದ ಹೊರಮಾವು ಬಿಬಿಎಂಪಿ ಅಧಿಕಾರಿಗಳಿಗೆ ಧಮಕಿ ಹಾಕಿದ್ದ ಎನ್ನಲಾಗಿದೆ. ಕಳೆದ ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಹೊರಮಾವುನಲ್ಲಿರುವ ಬಿಬಿಎಂಪಿ ಕಚೇರಿಗೆ ನುಗ್ಗಿ ನಾರಾಯಣಸ್ವಾಮಿ ದರ್ಪ ಮೆರೆದಿದ್ದು, ಎಆರ್ಒ ಚೆಂಗಲ್ ರಾಯಪ್ಪ ಅವರಿಗೆ ಬೆದರಿಕೆ ಹಾಕಿದ್ದಾರೆ. ಅವಶ್ಯಕತೆ ಇದ್ದರೆ ನಾರಾಯಣಸ್ವಾಮಿ ಅವರನ್ನು ಬಂಧಿಸಿ, ಕೂಡಲೇ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
Comments