ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ನಾರಾಯಣಸ್ವಾಮಿ

ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಅವರನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ ಇದೀಗ ಮಾಧ್ಯಮ ವರದಿ ಪ್ರಸಾರವಾದ ನಂತರ ಪರಿಶೀಲಿಸಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.
ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 16 ರಂದು ಬಿಬಿಎಂಪಿ ಕಚೇರಿಗೆ ತೆರಳಿ ತಮ್ಮ ದರ್ಪವನ್ನು ಪ್ರದರ್ಶಿಸಿದ್ದರು. ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಯಲ್ಲಿ ಗೂಂಡಾಗಿರಿ ನಡೆಸಿದ ವೀಡಿಯೋ ಎಲ್ಲಾ ಸುದ್ದಿವಾಹಿನಿಗಳಲ್ಲಿ ಹರಿದಾಡಿದ್ದು ಈ ವಿಚಾರವಾಗಿ ಅವರದ್ದು ತಪ್ಪು ಎಂದಾದಲ್ಲಿ ಅವರನ್ನು ಬಂಧಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.
Comments