ಉತ್ತರ ಕನ್ನಡ ಜಿಲ್ಲೆಯತ್ತ ಪಾದ ಬೆಳೆಸಿರುವ ಶಾ
ಮೋದಿಯ ನಂತರ ಚುನಾವಣೆಯ ಪ್ರಚಾರಕ್ಕೆ ಸಜ್ಜಾಗಿರುವ ಅಮಿತ್ ಶಾ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಶಾ ಇಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಇಂದು ಬೆಳಗ್ಗೆ 8.30 ಕ್ಕೆ ನೂತನ ಪಲಿಮಾರು ಛತ್ರ ಉದ್ಘಾಟನೆ ಮಾಡಿದ ಷಾ 9 ಗಂಟೆಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ 10 ಗಂಟೆಗೆಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪರೇಶ್ ಮೇಸ್ತಾ ಮನೆಗೆ ಭೇಟಿ ನೀಡಲಿರುವ ಶಾ, ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಬಳಿಕ 3 ಗಂಟೆಗೆ ಕುಮಟಾ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಸಭಾಭವನದಲ್ಲಿ ಬಿಜೆಪಿ ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಮಾವೇಶದಲ್ಲಿ ಪಾಲ್ಗೊಂಡು ಸಂವಾದ ನಡೆಸಲಿದ್ದಾರೆ.
Comments