ಬಂಡಾಯ ಶಾಸಕರಿಗೆ ಬಿಸಿ ಮುಟ್ಟಿಸಿರುವ ಕುಮಾರಣ್ಣ
ದಿನದಿಂದ ದಿನಕ್ಕೆ ಕಾವೇರುತ್ತಿರುವ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಮತದಾರರನ್ನು ಸೆಳೆಯುವತ್ತ ಗಮನ ಹರಿಸಿದ್ದಾರೆ ಇತ್ತ ಜೆಡಿಎಸ್ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಅಭ್ಯರ್ಥಿಗಳಿಗೆ ತಮ್ಮ ಕ್ಷೇತ್ರದ ಕಾರ್ಯದಲ್ಲಿ ತೊಡಗುವಂತೆ ಸೂಚಿಸಲಾಗಿದೆ. ಅಲ್ಲದೆ ಈ ಮಧ್ಯ ಜೆಡಿಎಸ್ ನಿಂದ ಬಂಡಾಯವೆದ್ದಿದ್ದ ಶಾಸಕರು ಕಾಂಗ್ರೆಸ್ ನಲ್ಲಿ ನೆಲೆ ಕಾಣದೆ ಹಿಂತಿರುಗಿ ತವರು ಕ್ಷೇತ್ರಕ್ಕೆ ಬರಲಿದ್ದಾರೆ.
ಅಲ್ಲದೆ ತಾವಿರುವ ಪಕ್ಷದಲ್ಲಿ ನೆಲೆ ಕಾಣದ ಹಿನ್ನಲೆ ಜೆಡಿಎಸ್ ಗೆ ಮತ್ತೆ ಬರುವ ನಿರೀಕ್ಷೆಯಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿಸಿದೆ. ಅಲ್ಲದೆ ಬಂಡಾಯ ಶಾಸಕರನ್ನು ಒಲಿಸಿ ಕೊಳ್ಳುವ ಪ್ರಯತ್ನದಲ್ಲಿದೆ ಜೆಡಿಎಸ್ ಎಂಬುದಕ್ಕೆ ಎಚ್.ಡಿ.ಕುಮಾರಸ್ವಾಮಿ ಯವರು ಬಂಡಾಯಶಾಸಕರಿಗೆ ಬಿಸಿ ಮುಟ್ಟಿಸಿದ್ದಾರೆ.ಇನ್ನೂ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಶಾಸಕರು ಜೆಡಿಎಸ್ ಗೆ ದೊಡ್ಡ ಸಮಸ್ಯೆ ಅಲ್ಲ, ಬಲವಂತವಾಗಿ ಅವರ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುವುದರಿಂದ ಯಾವುದೇ ಫಲಿತಾಂಶ ದೊರೆಯವುದಿಲ್ಲ ಎಂದು ಹೇಳಿದ್ದಾರೆ. ಎರಡನೇ ಹಂತದಲ್ಲಿ ಮತ್ತಷ್ಟು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗಾಗಿ ತಯಾರಿ ನಡೆಸುತ್ತಿದ್ದು, ಸಾರ್ವಜನಿಕರಿಗೆ ಹತ್ತಿರವಾಗಲು ಅಭ್ಯರ್ಥಿಗಳು ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ. ಇನ್ನು ಚುನಾವಣಾ ಪ್ರಚಾರಕ್ಕಾಗಿ 100 ಎಲ್ ಇಡಿ ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಈ ವಾಹನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಪಕ್ಷಗಳಿಗೆ ಜೆಡಿಎಸ್ ಪರ್ಯಾಯವಾಗಿದೆ ಎಂಬ ಸಂದೇಶವನ್ನು ರಾಜ್ಯ ಎಲ್ಲಾ ಕ್ಷೇತ್ರದ ಜನರಿಗೆ ತಿಳಿಸಲಾಗುತ್ತದೆ ಎಂದರು.
Comments