ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಾಂಬ್ ಸಿಡಿಸಿದ ಶಾ

ರಾಜ್ಯದಲ್ಲಿ ಮಹದಾಯಿ ವಿವಾದ ಇತ್ಯರ್ಥ ಪಡಿಸಲು ವಿಫಲವಾದ ಕಾಂಗ್ರೆಸ್ ಸರ್ಕಾರ ಈ ಸಮಸ್ಯೆ ಯನ್ನು ಬಗೆ ಹರಿಸಲಾಗುವುದಿಲ್ಲ ಎಂದಲ್ಲಿ ಕೇಂದ್ರ ಸರ್ಕಾರಕ್ಕೆ ಹೇಳಲಿ, ನಂತರ ಕೇಂದ್ರದಿಂದ ಮಧ್ಯ ಪ್ರವೇಶ ಮಾಡಿ ಮಹದಾಯಿ ವಿವಾದ ಇತ್ಯರ್ಥ ಪಡಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಾಂಗ್ರೆಸ್ ಪಕ್ಷದ ವಿರುದ್ಧ ಬಾಂಬ್ ಸಿಡಿಸಿದ್ದಾರೆ.
ಬಜೆಪಿ ಸಾಮಾಜಿಕ ಜಾಲತಾಣಿಗಳ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಮಹದಾಯಿ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಏಕೆ ಮುಂದಾಗುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಶಾ, ನದಿ ವಿವಾದ ಎರಡುಉ ರಾಜ್ಯಗಳ ನಡುವಿನ ಸಮಸ್ಯೆ, ಹೀಗಾಗಿ ಕೇಂದ್ರ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದರು. ರಾಜ್ಯ ಕಾಂಗ್ರೆಸ್ ಸರ್ಕಾರ ಮಹದಾಯಿ ವಿವಾದವನ್ನು ನಮ್ಮಿಂದ ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಎಂದು ಹೇಳಲಿ, ನಂತರ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುತ್ತದೆ ಎಂದು ಹೇಳಿದ್ದಾರೆ.
ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ.
Comments