ನಾಳೆ ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರ ಜೋರಾಗಿದ್ದು, ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ನ ಜನಾಶೀರ್ವಾದ ಯಾತ್ರೆಯನ್ನು ಮತ್ತಷ್ಟು ಪ್ರಬಲಗೊಳಿಸಲು ತಂತ್ರ ನಡೆಸಲಿದ್ದಾರೆ.
ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಚುನಾವಣೆ ಚಟುವಟಿಕೆಗಳು ಚುರುಕುಗೊಂಡಿದ್ದು, ಕಾಂಗ್ರೆಸ್ ಪಡೆ ಜನಾಶೀರ್ವಾದ ಯಾತ್ರೆಯನ್ನು ಮುಂದುವರಿಸಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫೆ. 24 ರಂದು ರಾಜ್ಯಕ್ಕೆ ಆಗಮಿಸಲಿದ್ದು, ಒಟ್ಟು ಮೂರು ದಿನ ವಿವಿಧೆಡೆ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡಗಳಲ್ಲಿ ಸಮಾವೇಶ ನಡೆಯಲಿದೆ. ನಾಳೆ ಅಥಣಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Comments