ಬೊಮ್ಮನಹಳ್ಳಿಯಲ್ಲಿ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲಿರುವ ಜೆಡಿಎಸ್..!!
ಅತಿ ಹೆಚ್ಚು ಮತದಾರರನ್ನು ಹೊಂದಿರುವ ಎರಡನೆ ಅತಿದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ಬೊಮ್ಮನಹಳ್ಳಿ ಕ್ಷೇತ್ರದಲ್ಲೀಗ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಕಳೆದ 2013ರ ಚುನಾವಣೆಯಲ್ಲಿ 2.10 ಲಕ್ಷದಷ್ಟಿದ್ದ ಮತದಾರರು ಈಗ ದುಪ್ಪಟ್ಟಾಗಿದ್ದಾರೆ. ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿತ್ತು, ಆದರೆ ಇದೀಗ ಜೆಡಿಎಸ್ ನ ಕೈ ವಶವಾಗಿದೆ.
ಇನ್ನು 2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಬಲ ಪೈಪೋಟಿ ನೀಡಿದ್ದ ಕುಪೇಂದ್ರರೆಡ್ಡಿ ಅವರು ಈಗ ಜೆಡಿಎಸ್‍ನಲ್ಲಿದ್ದಾರೆ. ಈ ಕ್ಷೇತ್ರಲ್ಲಿ ನೂರಕ್ಕೆ ನೂರು ಜೆಡಿಎಸ್ ಗೆ ಗೆಲುವು ಖಚಿತ ಎಂದು ಮೂಲಗಳು ತಿಳಿಸಿವೆ. ಕಳೆದ ಬಾರಿ ಶರದ್‍ಚಂದ್ರ ಬಾಬು ಎಂಬುವವರು ಜೆಡಿಎಸ್‍ನಿಂದ ಸ್ಪರ್ಧಿಸಿ 12 ಸಾವಿರ ಮತ ಪಡೆದಿದ್ದರು. ಈಗಲೂ ಅವರುಗಳು ಸ್ಪರ್ಧಾಕಾಂಕ್ಷಿಯಾಗಿದ್ದಾರೆ. ಆದರೆ, ಬಿಜೆಪಿಯವರು ಮಾತ್ರ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಖಚಿತವಾಗಿದ್ದು, ಗೆಲುವಿನ ಹುಮ್ಮಸ್ಸಿನಲ್ಲಿದ್ದಾರೆ. ಸತೀಶ್‍ರೆಡ್ಡಿ ಗೆಲುವಿಗೆ ಕಡಿವಾಣ ಹಾಕಲು ಜೆಡಿಎಸ್ ತಂತ್ರ ರೂಪಿಸುತ್ತಿದೆ. ಬಿಜೆಪಿಯನ್ನು ಮಣಿಸಿ ಈ ಕ್ಷೇತ್ರವನ್ನು ತಮ್ಮ ವಶಕ್ಕೆ ಪಡೆಯಬೇಕೆಂದು ಜೆಡಿಎಸ್ ಹವಣಿಸುತ್ತಿದೆ. ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪ್ರಯತ್ನ ಮುಂದುವರಿಸಿದೆ. ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿವೆ. ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ಚುನಾವಣಾ ಕದನ ರಂಗೇರುವುದರಲ್ಲಿ ಅನುಮಾನವಿಲ್ಲ.
Comments