ರೈತರ ಹೆಸರಿನಲ್ಲಿ ಬರ್ತ್ ಡೇ ಮಾಡ್ಕೊಂಡ ಬಿಎಸ್ ವೈಗೆ ಟಾಂಗ್ ಕೊಟ್ಟ ಎಚ್ ಡಿಕೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ 75 ನೇ ಹುಟ್ಟಿದ ಹಬ್ಬದ ಪ್ರಯುಕ್ತ 'ರೈತ ಬಂಧು ಯಡಿಯೂರಪ್ಪ' ಎಂಬ ಸಮಾವೇಶವನ್ನು ಏರ್ಪಡಿಸಿದರು. ಈ ಸಮಾವೇಶದ ಸಾವೇಶದ ಬಗ್ಗೆ ಮಾತನಾಡಿದ ಎಚ್ ಡಿಕೆ ಬಿಎಸ್ ವೈ ರೈತ ಕಾಳಜಿಯ ಯಾವ ಕೆಲಸ ಮಾಡಿದ್ದಾರೆ. ರೈತರ ಬಗ್ಗೆ ನಿಜಕ್ಕೂ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ರೈತರ ಸಾಲ ಮನ್ನಾ ಮಾಡಿಸಬೇಕಿತ್ತು ಎಂದು ಟೀಕಿಸಿದರು.
ಈ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ಬಿಎಸ್ ವೈಗೆ ಸಾಂಕೇತಿಕವಾಗಿ ನೇಗಿಲು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ರೈತರ ಹೆಸರಿನಲ್ಲಿ ತಮ್ಮ 75 ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ರೈತರ ಹೆಸರಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡರೆ ಸಾಲದು ರೈತರ ಸಂಕಷ್ಟಗಳಿಗೆ ನೆರವಾಗಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ. ಸಿದ್ದರಾಮಯ್ಯ ಅವರ ಅಪ್ಪನ ಆಣೆಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Comments