ಬಿಜೆಪಿ ಹೈಕಮಾಂಡ್ ಗೆ ಭೀತಿ ತಂದ ಕಾವೇರಿ...!

ಕಾವೇರಿ ನಿರ್ವಹಣಾ ಮಂಡಳಿ ಸ್ಥಾಪಿಸುವಂತೆ ಸುಪ್ರೀಂಕೊರ್ಟ್ ನೀಡಿರುವ ಆದೇಶ ಬಿಜೆಪಿ ಹೈಕಮಾಂಡ್ ಗೆ ತಲೆ ಬಿಸಿಯುಂಟಾಗಿದೆ. ಕಾವೇರಿ ನಿರ್ವಹಣಾ ಮಂಡಳಿಗೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗಿರುವುದರಿಂದ ಬಿಜಿಪಿ ಪೇಚಿಗೆ ಸಿಲುಕಿದಂತಾಗಿದೆ. ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದೆ,ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಸುಪ್ರೀಂಕೊರ್ಟ್ ತೀರ್ಪು ನುಂಗಲಾರದ ಬಿಸಿ ತುಪ್ಪದಂತಾಗಿದೆ.
ಒಂದು ವೇಳೆ ಕಾವೇರಿ ನಿರ್ವಹಣಾ ಮಂಡಳಿಯನ್ನು ಕೇಂದ್ರ ಸರ್ಕಾರ ರಚನೆ ಮಾಡಿದ್ದಲ್ಲಿ, ಅದು ಕರ್ನಾಟಕ ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಚುನಾವಣೆಯ ಕಾರಣದಿಂದಾಗಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚಿಸದಿರಲು ಚಿಂತನೆ ನಡೆಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಹೆಚ್ಚಿನ ಕಾಲಾವಕಾಶಕ್ಕೆ ಮನವಿ ಮಾಡಲು ಕೇಂದ್ರ ನಿರ್ಧಾರ ಮಾಡಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ನೀರು ಹಂಚಿಕೆಗೆ ವ್ಯವಸ್ಥೆ ರೂಪಿಸಲು ಸೂಚನೆಯನ್ನು ನೀಡಿತ್ತು. ಮಾರ್ಚ್ ಅಂತ್ಯಕ್ಕೆ ಸುಪ್ರಿಂಕೊರ್ಟ್ ನೀಡಿರುವ ಕಾಲವಾಶ ಮುಗಿಯಲಿದೆ. ಏಪ್ರಿಲ್ ಅಂತ್ಯ ಅಥವಾ ಮೇ ನಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಚುನಾವಣೆ ಹೊತ್ತಲ್ಲಿ ನೀತಿ ಸಂಹಿತೆ ನೆಪ ಮುಂದಿಟ್ಟುಕೊಂಡು ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಪ್ಲಾನ್ ಮಾಡುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments