ಸಧ್ಯದಲ್ಲೇ ಅಪಾಯದಿಂದ ಪಾರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು
ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇವಾಲಯ ರಥೋತ್ಸವ ಉದ್ಘಾಟನೆ ವೇಳೆ ಭಕ್ತರು ಏಕಾಏಕಿ ರಥ ಎಳೆದಿದ್ದರಿಂದ ಉಂಟಾದ ನೂಕು ನುಗ್ಗಲಿನಲ್ಲಿ ಕಾಲ್ತುಳಿತದ ಅಪಾಯದಿಂದ ಸ್ವಲ್ಪದರಲ್ಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಕುಟುಂಬ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಡೆದಿದೆ.
ತಕ್ಷಣ ಅವರ ನೆರವಿಗೆ ಧಾವಿಸಿದ ಪುತ್ರ ಹೆಚ್.ಡಿ. ರೇವಣ್ಣ ಹಾಗೂ ಅಂಗರಕ್ಷಕರು, ಸ್ವಲ್ಪದರಲ್ಲೇ ಚನ್ನಮ್ಮರನ್ನು ಅಪಾಯದಿಂದ ಪಾರು ಮಾಡಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ತೊಂದೆರೆ ಉಂಟಾಗಿಲ್ಲ ಅಂತ ತಿಳಿದು ಬಂದಿದ್ದು, ಘಟನ ಸ್ಥಳದಲ್ಲಿ ಹೆಚ್ಚಿನ ಪೋಲಿಸ್ ಬಂದೋಬಸ್ತ್ ಅನ್ನು ಆಯೋಜಿಸಲಾಗಿದ್ದು, ಸ್ಥಳದಲ್ಲಿದ್ದ ಜನರನ್ನು ತಹಬದಿಗೆ ತರುವಲ್ಲಿ ಪೋಲಿಸ್ ಇಲಾಖೆ ಯಶಸ್ವಿಯಾಗಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
Comments