ಕಾಂಗ್ರೆಸ್ ಶಾಸಕನ ಬಂಡವಾಳ ಬಟ್ಟ ಬಯಲು ಮಾಡಿದ ಜೆಡಿಎಸ್

ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ ಸೇರಿದಂತೆ ನಾಲ್ವರು ವಿರುದ್ಧ ಸಿಐಡಿ ಚಾರ್ಜ್‌ಶೀಟ್ ಸಲ್ಲಿಸಿದೆ. ಕಳೆಪೆ ಕಾಮಗಾರಿ, ನಕಲಿ ಬಿಲ್ ಸೃಷ್ಟಿಸಿ 1,539 ಕೋಟಿ ರೂ. ಮಂಜೂರು ಮಾಡಿಸಿಕೊಂಡಿದ್ದಾರೆ ಎಂಬುದು ಆರೋಪವಾಗಿದೆ. ಜೆಡಿಎಸ್ ಕಾಂಗ್ರೆಸ್ ಶಾಸಕನ ಬಂಡವಾಳ ಬಯಲು ಮಾಡುವಲ್ಲಿ ಯಶಸ್ವಿಯಾಗಿದೆ.
2008 ರಿಂದ 2012ರ ತನಕ ಬೆಂಗಳೂರು ನಗರದಲ್ಲಿ ಕೈಗೊಂಡಿದ್ದ 285 ಕಳಪೆ ಕಾಮಗಾರಿಗಳಿಗೆ ನಕಲಿ ಬಿಲ್ ಸೃಷ್ಟಿಸಿದ ಪ್ರಕರಣವಿದಾಗಿದೆ. ಮೊದಲು ಬಿಎಂಟಿಎಫ್‌ನಲ್ಲಿ ದೂರು ದಾಖಲಾಗಿತ್ತು. ಬಳಿಕ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಸುಮಾರು ಏಳು ವರ್ಷಗಳ ಕಾಲ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಎಲ್ಲಾ ಆರೋಪಿಗಳಿಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಬೆಂಗಳೂರು ನಗರದ ಬಹುದೊಡ್ಡ ಹಗರಣವಿದಾಗಿದೆ. ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮುನಿರತ್ನ. ಕಾರ್ಯಪಾಲ ಇಂಜಿನಿಯರ್ ಬಿ.ಜಿ.ಪ್ರಕಾಶ್ ಕುಮಾರ್ (ನಿವೃತ್ತ), ವೈ.ಎಂ.ಮುನಿರಾಜು, ಸಹಾಯಕ ಇಂಜಿನಿಯರ್ ಎಂ.ಕೆ.ಹರೀಶ್ ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.ರಾಜರಾಜೇಶ್ವರಿ ನಗರ, ಮಲ್ಲೇಶ್ವರ ಮತ್ತು ಗಾಂಧಿ ನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು ಕಳಪೆಯಾಗಿತ್ತು. ನಕಲಿ ಬಿಲ್ ಸೃಷ್ಟಿ ಮಾಡಿದ್ದ ಆರೋಪಿಗಳು 1,539 ಕೋಟಿ ಮೊತ್ತವನ್ನು ಮಂಜೂರು ಮಾಡಿಸಿಕೊಂಡಿದ್ದರು. ಹಿಂದೆ ಬಿಬಿಎಂಪಿ ಆಯುಕ್ತರಾಗಿದ್ದ ಜೆಡಿಎಸ್ ನ ಸಿದ್ದಯ್ಯ ಅವರು, ಬೆಂಗಳೂರು ಮಹಾನಗರ ಕಾರ್ಯಪಡೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಗಂಭೀರವಾಗಿದ್ದರಿಂದ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಸಿಐಡಿ 7 ವರ್ಷಗಳ ಕಾಲ ಒಂದೊಂದು ಕಾಮಗಾರಿ ಬಗ್ಗೆಯೂ 90 ಪ್ರಕರಣಗಳನ್ನು ದಾಖಲು ಮಾಡಿಕೊಂಡು ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.
Comments