ಮಾರ್ಚ್ 25 ರಂದು ಜೆಡಿಎಸ್ ನ ಏಳೂ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ..!!

14 Mar 2018 12:21 PM | Politics
869 Report

ಮಾರ್ಚ್ 25 ರಂದು ಮೈಸೂರಿನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ಏಳೂ ಶಾಸಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ, ಈ ಏಳೂ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಜೆಡಿಎಸ್ ವಿರುದ್ಧ ಬಂಡಾಯವೆದ್ದಿದ್ದ 7 ಮಂದಿ ಶಾಸಕರು ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದು, ಮಾರ್ಚ್ 24 ರಂದು ಸ್ಪೀಕರ್ ಕೋಳಿವಾಡ ಅವರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್,ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ,ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ, ಪುಲಿಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಹಗರಿಬೊಮ್ಮನಹಳ್ಳಿ ಶಾಸಕ ಶಾಸಕ ಭೀಮಾ ನಾಯಕ್ ಅವರು ಬಂಡಾಯ ಶಾಸಕರಾಗಿದ್ದಾರೆ.

 

Edited By

Shruthi G

Reported By

Shruthi G

Comments