ರಾಜ್ಯಸಭೆ ಚುನಾವಣೆಗೆ ಬಗ್ಗೆ ಜೆಡಿಎಸ್ ಅಭ್ಯರ್ಥಿ ಫಾರುಕ್ ಹೇಳಿದ್ದು ಹೀಗೆ..!!

14 Mar 2018 3:15 PM | Politics
607 Report

ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾದರೆ ಜಾತ್ಯತೀತ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಕೈ ಜೋಡಿಸುವುದು ಅನಿವಾರ್ಯವಾಗಿದ್ದು, ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕೆಂದು ಫಾರುಕ್ ಅಬ್ದುಲ್ಲಾ ಮನವಿ ಮಾಡಿದ್ದಾರೆ. ಅಲ್ಪ ಸಂಖ್ಯಾತ ಸಮುದಾಯದ ಪರವಾಗಿ ನಾನು ನಾಮಪತ್ರ ಸಲ್ಲಿಸಿದ್ದೇನೆ. ಕೋಮು ಶಕ್ತಿಗಳನ್ನು ಮಟ್ಟ ಹಾಕಬೇಕಾದರೆ ಜಾತ್ಯತೀತ ಶಕ್ತಿಗಳನ್ನು ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯಲ್ಲಿ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದರು.

ಮುಂದೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮತ್ತೆ ಜಾತ್ಯತೀತ ಶಕ್ತಿಗಳು ಒಂದುಗೂಡುವ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಲವಾರು ಬಾರಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಕಾಂಗ್ರೆಸ್ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಜೆಡಿಎಸ್‍ನಲ್ಲಿ 37 ಮಂದಿ ಶಾಸಕರಿದ್ದು, ಗೆಲ್ಲಲು ಮೂರ್ನಾಲ್ಕು ಮಂದಿ ಶಾಸಕರ ಅಗತ್ಯವಿದೆ. ಪಕ್ಷೇತರರನ್ನು ಸಂಪರ್ಕಿಸುತ್ತಿದ್ದು, ಬಹುತೇಕ ನನಗೆ ಬೆಂಬಲ ಸಿಗುವ ವಿಶ್ವಾಸವಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

Edited By

Shruthi G

Reported By

Shruthi G

Comments