ರಾಜ್ಯಸಭೆ ಚುನಾವಣೆ : ಜೆಡಿಎಸ್ ನ ಏಳು ಬಂಡಾಯ ಶಾಸಕರು ಸೇರಿದಂತೆ ಎಲ್ಲಾ ಶಾಸಕರಿಗೆ ವಿಪ್ ಜಾರಿ

ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಏಳು ಬಂಡಾಯ ಶಾಸಕರು ಸೇರಿದಂತೆ ಎಲ್ಲಾ 37 ಶಾಸಕರಿಗೆ ಜೆಡಿಎಸ್ ವಿಪ್ ಜಾರಿ ಮಾಡಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎಂ.ಫಾರೂಕ್ ಪರ ತಮ್ಮ ಮೊದಲ ಪ್ರಾಶಸ್ತ್ಯ ಮತ ನೀಡಬೇಕೆಂದು 7 ಬಂಡಾಯ ಶಾಸಕರೂ ಸೇರಿದಂತೆ ಎಲ್ಲಾ ಜೆಡಿಎಸ್ ಶಾಸಕರಿಗೆ ವಿಪ್ ನೀಡಿದ್ದಾರೆ.
ರಾಜ್ಯಸಭೆಗೆ ಮಾ.23 ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಪಕ್ಷ ಬಿ.ಎಂ.ಫಾರೂಕ್ ಅವರನ್ನು ಕಣಕ್ಕಿಳಿಸಿದೆ. ಪಕ್ಷೇತರ ಶಾಸಕರು ಹಾಗೂ ಇನ್ನಿತರೆ ಶಾಸಕರ ಬೆಂಬಲದೊಂದಿಗೆ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಕಣಕ್ಕಿಳಿಸಿದೆ.
Comments