ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಚುನಾವಣೆಯ ಮತದಾನ
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ವಿಧಾನ ಸೌಧದಲ್ಲಿ ಶಾಸಕರು ಮತ ಚಲಾಯಿಸುತ್ತಿದ್ದಾರೆ. ಶೃಂಗೇರಿಯ ಬಿಜೆಪಿ ಶಾಸಕ ಡಿ.ಎನ್.ಜೀವರಾಜ್ ಮೊದಲನೇಯವರಾಗಿ ಮತ ಚಲಾಯಿಸಿದರು.
ಆ ನಂತರ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಮತ ಚಲಾಯಿಸಿದರು. ವಿಧಾನ ಸೌಧದಲ್ಲಿ ಶಾಸಕರು ಮತದಾನ ಮಾಡಲು ಸಾಲುಗಟ್ಟಿ ನಿಂತಿದ್ದಾರೆ. ಕಾಂಗ್ರೆಸ್‌ಗೆ ಎರಡು ಮತ್ತು ಬಿಜೆಪಿಗೆ ಒಂದು ಸ್ಥಾನದ ಗೆಲುವು ಸುಲಭವಾಗಿದ್ದು, ನಾಲ್ಕನೇ ಸ್ಥಾನಕ್ಕಾಗಿ ಕಾಂಗ್ರೆಸ್‌ನ ಜಿ.ಸಿ.ಚಂದ್ರಶೇಖರ್ ಮತ್ತು ಜೆಡಿಎಸ್‌ನ ಬಿ.ಎಂ.ಫಾರೂಖ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪಕ್ಷೇತರರ ಏಳು ಮತಗಳು ನಾಲ್ಕನೇ ಅಭ್ಯರ್ಥಿ ಗೆಲುವಿನಲ್ಲಿ ನಿರ್ಣಾಯಕವಾಗಲಿವೆ. ಜೆಡಿಎಸ್ ಬಂಡಾಯ ಶಾಸಕರಿಗೆ ರಾಜ್ಯಸಭಾ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಲಭಿಸಿದೆ.
Comments