ನಾಡ ದೇವಿಗೆ ನಮನ ಸಲ್ಲಿಸಿದ ರಾಹುಲ್ ಗಾಂಧಿ
ಎರಡು ದಿನಗಳ ಮೈಸೂರು, ಮಂಡ್ಯ, ಚಾಮರಾಜನಗರ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಇಂದು ಬೆಳಿಗ್ಗೆ 9 ಗಂಟೆಗೆ ದೆಹಲಿಯಿಂದ ಮಂಡಕಳ್ಳಿ ವಿಶೇಷ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಇಲ್ಲಿನ ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಉಪಸ್ಥಿತರಿದ್ದರು. ನಾಡದೇವತೆ ದರ್ಶನದ ಬಳಿಕ ಬೆಳಿಗ್ಗೆ 10.15 ಕ್ಕೆ ಮಹಾರಾಣಿ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳ ಜತೆ ರಾಹುಲ್ ಸಂವಾದ ನಡೆಸಲಿದ್ದಾರೆ. ನಂತರ ಚಾಮರಾಜನಗರಕ್ಕೆ ತೆರಳಿದ್ದಾರೆ.
Comments