ನಾಳೆ ಮೈಸೂರು ಅರಮನೆಯತ್ತ ಚಿತ್ತ ಹರಿಸಿರುವ ಅಮಿತ್ ಶಾ

ಅಮಿತ್ ಶಾ ನಾಳೆ ಮೈಸೂರು ನಗರಕ್ಕೆ ಆಗಮಿಸಲಿದ್ದು, ಬಿಡುವಿಲ್ಲದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ನಾಳೆ ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹೊರಟು ರಾತ್ರಿ 8.30ಕ್ಕೆ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಸೀದಾ ಸರ್ಕಾರಿ ಅತಿಥಿಗೃಹಕ್ಕೆ ತೆರಳಿ ವಿಶ್ರಮಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 9.20ಕ್ಕೆ ಸುತ್ತೂರುಮಠಕ್ಕೆ ತೆರಳಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. 9.45ಕ್ಕೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜಮಾತೆ ಪ್ರಮೋದದೇವಿ ಒಡೆಯರ್ ಹಾಗೂ ಯಧುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ನಂತರ 11ರಿಂದ 12 ಗಂಟೆವರೆಗೆ ಕೃಷ್ಣರಾಜ, ಚಾಮರಾಜ, ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಂಡಿರುವ ನವಶಕ್ತಿ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.20ರವರೆಗೆ ಕ್ಯಾತಮಾರನಹಳ್ಳಿಯಿಂದ ಹೊರಟು ದಲಿತ ಮುಖಂಡರೊಂದಿಗೆ ಸಂವಾದ ನಡೆಸಿ ಅವರೊಂದಿಗೆ ಭೋಜನ ಕೂಟದಲ್ಲಿ ಪಾಲ್ಗೊಳ್ಳುವರು. ನಂತರ ಮೈಸೂರು ಹೆಲಿಪ್ಯಾಡ್‍ನಿಂದ ಕೊಳ್ಳೆಗಾಲಕ್ಕೆ ತೆರಳಿ ಕೊಳ್ಳೇಗಾಲ ಮತ್ತು ಹನೂರಿನಲ್ಲಿ ನವಶಕ್ತಿ ಸಮಾವೇಶದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.
Comments